TSK

TSK · ಙ್ಞಾನೋಕ್ತಿಗಳು 7:26

مراجع Treasury of Scripture Knowledge في Kannada KJV.

العودة إلى المقطع

ಸೌಲನ ಮನೆಗೂ ದಾವೀದನ ಮನೆಗೂ ಯುದ್ಧವುನಡೆಯುತ್ತಿರುವಾಗ ಏನಾಯಿತಂದರೆ, ಅಬ್ನೇ ರನು ಸೌಲನ ಮನೆಗಾಗಿ ತನ್ನನ್ನು ಬಲಪಡಿಸಿ ಕೊಂಡನು.

ಇದು ಸಾಲದೆ ಇದ್ದರೆ ಇಂಥಿಂಥವುಗಳನ್ನು ನಿನಗೆ ಇನ್ನೂ ಕೊಡುತ್ತಿದ್ದೆನು. ನೀನು ಕರ್ತನ ದೃಷ್ಟಿಗೆ ಈ ಕೆಟ್ಟಕಾರ್ಯವನ್ನು ಮಾಡುವ ಹಾಗೆ ಆತನ ಆಜ್ಞೆ ಯನ್ನು ತಿರಸ್ಕರಿಸಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿ ಯನ್ನು ನಿನಗೆ ಹೆಂಡತಿಯಾಗಿ ತೆಗೆದುಕೊಂಡಿ; ಇದಲ್ಲದೆ ಅವನನ್ನು ಅಮ್ಮೋನನ ಮಕ್ಕಳ ಕತ್ತಿಯಿಂದ ಕೊಂದು ಹಾಕಿಸಿದಿ.

ಇಸ್ರಾಯೇಲಿನ ಅರಸನಾದ ಸೊಲೊಮೋನನು ಇವುಗಳಿಂದ ಪಾಪ ಮಾಡಿದ ನಲ್ಲವೇ? ಆದರೆ ಅನೇಕ ಜನಾಂಗಗಳಲ್ಲಿ ಅವನ ಹಾಗೆ ಮತ್ತೊಬ್ಬ ಅರಸನು ಇದ್ದದ್ದಿಲ್ಲ; ಅವನು ತನ್ನ ದೇವರಿಗೆ ಪ್ರಿಯನಾಗಿದ್ದ ಕಾರಣ ದೇವರು ಅವನನ್ನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಮಾಡಿ ದನು; ಆದರೂ ಅನ್ಯಸ್ತ್ರೀಯರು ಅವನನ್ನು ಸಹ ಪಾಪ ಮಾಡುವ ಹಾಗೆ ಮಾಡಿದರು.

ಅವರಲ್ಲಿ ಕೆಲವರು ಜಾರತ್ವಮಾಡಿ ಒಂದೇ ದಿನದಲ್ಲಿ ಇಪ್ಪತ್ತುಮೂರು ಸಾವಿರ ಮಂದಿ ಸತ್ತರು; ನಾವು ಜಾರತ್ವ ಮಾಡದೆ ಇರೋಣ.

ಅತಿ ಪ್ರಿಯರೇ, ಪರದೇಶಸ್ಥರೂ ಪ್ರವಾಸಿಗಳೂ ಆಗಿರುವ ನೀವು ನಿಮ್ಮ ಆತ್ಮಕ್ಕೆ ವಿರೋಧವಾಗಿ ಯುದ್ಧಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿ ರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.