TSK

TSK · ರೋಮಾಪುರದವರಿಗೆ 16:21

مراجع Treasury of Scripture Knowledge في Kannada KJV.

العودة إلى المقطع

ತರುವಾಯ ಅವನು ದೆರ್ಬೆ ಮತ್ತು ಲುಸ್ತ್ರಕ್ಕೆ ಬಂದನು; ಅಲ್ಲಿ ಇಗೋ, ನಂಬಿಕೊಂಡಿದ್ದ ಯೆಹೂದ್ಯ ಸ್ತ್ರೀಯ ಮಗನಾದ ತಿಮೊಥೆಯನೆಂಬ ಹೆಸರುಳ್ಳ ಒಬ್ಬ ಶಿಷ್ಯನಿದ್ದನು. ಅವನ ತಂದೆಯು ಗ್ರೀಕನು.

ಕೂಡಲೆ ಸಹೋದರರು ಪೌಲನನ್ನು ಸಮುದ್ರದ ತನಕ ಸಾಗ ಕಳುಹಿಸಿದರು. ಆದರೆ ಸೀಲನೂ ತಿಮೊಥೆಯನೂ ಅಲ್ಲೇ ನಿಂತರು.

ಹೀಗೆ ಅವನು ತನಗೆ ಉಪಚಾರ ಮಾಡುವವರಲ್ಲಿ ಇಬ್ಬರಾದ ತಿಮೊಥೆಯನನ್ನೂ ಎರಸ್ತನನ್ನೂ ಮಕೆ ದೋನ್ಯಕ್ಕೆ ಕಳುಹಿಸಿ ತಾನಾದರೋ ಆಸ್ಯದಲ್ಲಿ ಕೆಲವು ಕಾಲ ನಿಂತನು.

ನನಗಿಂತ ಮೊದಲು ಕ್ರಿಸ್ತ ನಲ್ಲಿದ್ದು ಅಪೊಸ್ತಲರಲ್ಲಿ ಪ್ರಖ್ಯಾತಿಗೊಂಡ ನನ್ನ ಬಂಧುಗಳೂ ನನ್ನ ಜೊತೆ ಸೆರೆಯವರೂ ಆಗಿರುವ ಅಂದ್ರೋನಿಕನಿಗೂ ಯೂನ್ಯನಿಗೂ ವಂದನೆಗಳು.

¶ ದೇವರ ಚಿತ್ತಾನುಸಾರ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನು ಮತ್ತು ನಮ್ಮ ಸಹೋದರನಾದ ತಿಮೊಥೆಯನು ಕೊರಿಂಥದಲ್ಲಿರುವ ದೇವರ ಸಭೆಗೂ ಅಕಾಯದಲ್ಲಿರುವ ಪರಿಶುದ್ಧರೆ ಲ್ಲರಿಗೂ ಬರೆಯುವದೇನಂದರೆ

¶ ಯೇಸು ಕ್ರಿಸ್ತನ ಸೇವಕರಾದ ಪೌಲ ತಿಮೊಥೆಯರು ಕ್ರಿಸ್ತ ಯೇಸುವಿನಲ್ಲಿ ಫಿಲಿಪ್ಪಿಯದ ಪರಿಶುದ್ಧರೆಲ್ಲರಿಗೂ ಅವರೊಂದಿಗಿರುವ ಸಭಾಧ್ಯಕ್ಷರಿಗೂ ಸಭಾಸೇವಕರಿಗೂ--

¶ ದೇವರ ಚಿತ್ತಾನುಸಾರವಾಗಿ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನೂ ನಮ್ಮ ಸಹೋದರನಾದ ತಿಮೊಥೆಯನೂ

ನಿಮ್ಮನ್ನು ದೃಢಪಡಿಸುವದಕ್ಕೂ ನಿಮ್ಮ ನಂಬಿಕೆಯ ವೃದ್ಧಿಗಾಗಿ ನಿಮ್ಮನ್ನು ಆದರಿಸುವದಕ್ಕೂ ನಮ್ಮ ಸಹೋದರನೂ ದೇವರ ಸೇವಕನೂ ಕ್ರಿಸ್ತನ ಸುವಾರ್ತೆಯಲ್ಲಿ ನಮ್ಮ ಜೊತೆ ಸೇವಕನೂ ಆಗಿರುವ ತಿಮೊಥೆಯನನ್ನು ಕಳುಹಿಸಿದೆವು.

¶ ನಮ್ಮ ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೊನೀಕದವರ ಸಭೆಗೆ ಪೌಲ ಸಿಲ್ವಾನ ತಿಮೊಥೆ ಯರು ಬರೆಯುವದೇನಂದರೆ--

ಓ ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ದೂರ ಓಡಿಹೋಗು; ನೀತಿ ಭಕ್ತಿ ನಂಬಿಕೆ ಪ್ರೀತಿ ತಾಳ್ಮೆ ಸಾತ್ವಿಕತ್ವ ಇವುಗಳನ್ನು ಅನುಸರಿಸು.

ನನ್ನ ಅತಿ ಪ್ರಿಯಕುಮಾರನಾದ ತಿಮೊಥೆಯನಿಗೆ ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.