ಆದರೆ ದುಷ್ಟನಿಗೆ ದೇವರು ಹೇಳುವದೇನಂದರೆ --ನನ್ನ ನಿಯಮಗಳನ್ನು ಪ್ರಕಟಿಸುವದು ನಿನಗೇನು? ಇಲ್ಲವೆ ನನ್ನ ಒಡಂಬಡಿಕೆಯನ್ನು ನಿನ್ನ ಬಾಯಲ್ಲಿ ಉಚ್ಚರಿಸುವದೇಕೆ?
TSK
TSK · ರೋಮಾಪುರದವರಿಗೆ 2:21
مراجع Treasury of Scripture Knowledge في Kannada KJV.
ಹೌದು, ಎಂದಿಗೂ ಸಾಕೆನ್ನದ ಹೊಟ್ಟೇಬಾಕ ನಾಯಿಗಳು, ಅವರು ಗ್ರಹಿಕೆಯಿಲ್ಲದ ಕುರುಬರು; ಅವರೆಲ್ಲರು ತಮ್ಮ ತಮ್ಮ ಸ್ವಂತ ಮಾರ್ಗಕ್ಕೂ ಪ್ರತಿಯೊಬ್ಬನು ತನಗೆ ಲಾಭ ಸಿಕ್ಕುವ ಕಡೆಗೂ ತಿರುಗಿ ಕೊಳ್ಳುವನು.
ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ ಪ್ರಾಣ ಗಳನ್ನು ನುಂಗುವ ಹಾಗೆ ಬೇಟೆಯ ತೋಳಗಳಂತಿ ದ್ದಾರೆ.
ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ; ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ; ಅದರ ಪ್ರವಾ ದಿಗಳು ಹಣಕ್ಕೆ ಶಕುನ ಹೇಳುತ್ತಾರೆ; ಆದರೂ ಕರ್ತನ ಮೇಲೆ ಆತುಕೊಂಡು--ಕರ್ತನು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವದಿಲ್ಲ ಅನ್ನು ತ್ತಾರೆ.
ಆದದರಿಂದ ಅವರು ನಿಮಗೆ ಹೇಳುವವು ಗಳನ್ನೆಲ್ಲಾ ಕೈಕೊಂಡು ನಡೆಯಿರಿ; ಅವರ ಕ್ರಿಯೆಗಳ ಪ್ರಕಾರ ನೀವು ಮಾಡಬೇಡಿರಿ; ಯಾಕಂದರೆ ಅವರು ಹೇಳುತ್ತಾರೆ, ಮಾಡುವದಿಲ್ಲ.
ಅದಕ್ಕೆ ಆತನು--ನ್ಯಾಯಶಾಸ್ತ್ರಿಗಳಾದ ನಿಮಗೂ ಅಯ್ಯೋ! ಯಾಕಂದರೆ ಹೊರಲು ಕಠಿಣವಾದ ಹೊರೆ ಗಳನ್ನು ಮನುಷ್ಯರ ಮೇಲೆ ಹೊರಿಸಿ ನಿಮ್ಮ ಬೆರಳುಗಳಲ್ಲಿ ಒಂದರಿಂದಾದರೂ ನೀವು ಆ ಹೊರೆಗಳನ್ನು ಮುಟ್ಟು ವದಿಲ್ಲ.
ಆಗ ಅವನು--ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ನ್ಯಾಯತೀರಿ ಸುವೆನು. ನಾನು ಇಡದೆ ಇರುವಲ್ಲಿ ತಕ್ಕೊಳ್ಳುವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆದ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತಲ್ಲಾ.
ಸುನ್ನತಿ ಮಾಡಿಸಿಕೊಳ್ಳುವ ತಾವಾದರೊ ನ್ಯಾಯಪ್ರಮಾಣ ವನ್ನು ಕೈಕೊಂಡು ನಡೆಯುವದಿಲ್ಲ. ಆದರೆ ಅವರು ನಿಮ್ಮ ಶರೀರದ ವಿಷಯದಲ್ಲಿ ಹೆಚ್ಚಳ ಪಡುವದಕ್ಕಾಗಿ ನಿಮಗೆ ಸುನ್ನತಿಯಾಗಬೇಕೆಂದು ಅಪೇಕ್ಷಿಸುತ್ತಾರೆ.