ದೇವರ ಮನುಷ್ಯನ ಸೇವಕನು ಬೆಳಿಗ್ಗೆ ಎದ್ದು ಹೊರಗೆ ಬಂದು ನೋಡಿದಾಗ ರಥರಥಾಶ್ವಸಹಿತವಾದ ಮಹಾಸೈನ್ಯವು ಬಂದು ಪಟ್ಟಣದ ಸುತ್ತಲೂ ನಿಂತಿರುವುದನ್ನು ಕಂಡು ತನ್ನ ಯಜಮಾನನಿಗೆ, “ಅಯ್ಯೋ, ಸ್ವಾಮಿ ನಾವು ಏನು ಮಾಡೋಣ?” ಎಂದನು.
TSK
TSK · 1 ಪೂರ್ವಕಾಲವೃತ್ತಾ 21:13
Treasury of Scripture Knowledge references in ಕನ್ನಡ IRV.
¶ ಅಲ್ಲಿ ಯೆಹೋವನ ಒಬ್ಬ ಪ್ರವಾದಿಯಿದ್ದನು; ಅ ವನ ಹೆಸರು ಓದೇದ್. ಅವನು ಸಮಾರ್ಯಕ್ಕೆ ಬರುತ್ತಿದ್ದ ಸೈನ್ಯದವರನ್ನು ಎದುರುಗೊಂಡು ಅವರಿಗೆ, “ನಿಮ್ಮ ಪೂರ್ವಿಕರ ದೇವರಾದ ಯೆಹೋವನು ಯೆಹೂದ್ಯರ ಮೇಲೆ ಕೋಪಗೊಂಡು ಅವರನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟನಷ್ಟೆ. ಅವರನ್ನು ಸಂಹರಿಸುವುದರಲ್ಲಿ ನಿಮ್ಮ ರೌದ್ರವು ಆಕಾಶವನ್ನು ಮುಟ್ಟಿತು.
ನೀವೆಲ್ಲರೂ ಮೂರು ದಿನ ಹಗಲಿರುಳು ಅನ್ನಪಾನಗಳನ್ನು ಬಿಟ್ಟು ನನಗೋಸ್ಕರ ಉಪವಾಸ ಮಾಡಿರಿ; ಅದರಂತೆ ನಾನೂ ನನ್ನ ಸೇವಕಿಯರೊಡನೆ ಉಪವಾಸದಿಂದಿರುವೆನು. ಅನಂತರ ನಾನು ವಿಧಿಮೀರಿ ಅರಸನ ಬಳಿಗೆ ಹೋಗುವೆನು, ಸತ್ತರೆ ಸಾಯುತ್ತೇನೆ” ಎಂದು ಹೇಳಿಸಿದಳು.
¶ ಪ್ರೀತಿಸ್ವರೂಪನಾದ ದೇವರೇ, ನನ್ನನ್ನು ಕರುಣಿಸು; ಕರುಣಾನಿಧಿಯೇ, ನನ್ನ ದ್ರೋಹವನ್ನೆಲ್ಲಾ ಅಳಿಸಿಬಿಡು.
ಯೆಹೋವನೇ, ನನ್ನ ಮೊರೆಯನ್ನು ಲಾಲಿಸು; ನಿನ್ನ ಕೃಪೆಯು ಶುಭಕರವಾಗಿದೆಯಲ್ಲಾ. ಕರುಣಾನಿಧಿಯೇ, ನನ್ನನ್ನು ಕಟಾಕ್ಷಿಸು.
ಕರ್ತನೇ, ನೀನು ಕನಿಕರವೂ, ದಯೆಯೂ ಉಳ್ಳ ದೇವರು; ದೀರ್ಘಶಾಂತನು, ಬಹಳ ಪ್ರೀತಿಯೂ, ನಂಬಿಕೆಯೂ ಉಳ್ಳವನು.
ನಮ್ಮ ಪೂರ್ವಿಕರು ಐಗುಪ್ತದಲ್ಲಿ ನಿನ್ನ ಅದ್ಭುತಕ್ರಿಯೆಗಳನ್ನು ಲಕ್ಷಿಸಲಿಲ್ಲ; ನಿನ್ನ ಕೃಪಾತಿಶಯವನ್ನು ಸ್ಮರಿಸಲಿಲ್ಲ. ಅವರು ಕೆಂಪು ಸಮುದ್ರದ ಬಳಿಯಲ್ಲಿ ನಿನಗೆ ತಿರುಗಿಬಿದ್ದರು.
ನೀನು ಪಾಪವನ್ನು ಕ್ಷಮಿಸುವವನಾದುದರಿಂದ, ಮನುಷ್ಯರ ಭಯಭಕ್ತಿಗೆ ನೀನೇ ಪಾತ್ರನು.
ಶಿಷ್ಟನು ತನ್ನ ಪಶುಗಳ ಕ್ಷೇಮವನ್ನು ಲಕ್ಷಿಸುತ್ತಾನೆ, ದುಷ್ಟನ ವಾತ್ಸಲ್ಯವೋ ಕ್ರೂರತನವೇ.
ನಾನು ನನ್ನ ಜನರ ಮೇಲೆ ರೋಷಗೊಂಡು, ನನ್ನ ಸ್ವತ್ತನ್ನು ಹೊಲೆಗೆಡಿಸಿದೆನು. ಅವರನ್ನು ನಿನ್ನ ಕೈವಶ ಮಾಡಳು, ನೀನು ಅವರನ್ನು ಕರುಣಿಸದೆ ಬಹುಭಾರವಾದ ನೊಗವನ್ನು ಹೊರಿಸಿದಿ.
ಯೆಹೋವನು ನಮಗೆ ಅನುಗ್ರಹಿಸಿದ್ದನ್ನೆಲ್ಲಾ ಸ್ಮರಿಸಿ ಆತನ ಕೃಪಾಕಾರ್ಯಗಳನ್ನು ಮತ್ತು ಸ್ತುತ್ಯಕೃತ್ಯಗಳನ್ನು, ಆತನು ಕನಿಕರದಿಂದಲೂ, ಕೃಪಾತಿಶಯದಿಂದಲೂ ಇಸ್ರಾಯೇಲ್ ವಂಶದವರಿಗೆ ದಯಪಾಲಿಸಿರುವ ಮಹೋಪಕಾರವನ್ನೂ ಪ್ರಸಿದ್ಧಿಪಡಿಸುವೆನು.
ಆತನು ವ್ಯಥೆಗೊಳಿಸಿದರೇನು, ತನ್ನ ಕೃಪಾತಿಶಯದಿಂದ ಕನಿಕರಿಸುವನು.
ಆಗ ಅವನು ಯೆಹೋವನಿಗೆ ಮೊರೆಯಿಟ್ಟನು, “ಯೆಹೋವನೇ, ಲಾಲಿಸು, ನಾನು ಸ್ವದೇಶದಲ್ಲಿರುವಾಗಲೇ ಹೀಗಾಗುವುದೆಂದು ಹೇಳಿದೆನಷ್ಟೆ; ನೀನು ದಯೆಯೂ, ಕನಿಕರವೂ, ದೀರ್ಘಶಾಂತಿಯೂ, ಮಹಾಕೃಪೆಯೂ ಉಳ್ಳ ದೇವರು, ಮಾಡಬೇಕೆಂದಿದ್ದ ಕೇಡಿಗೆ ಮನಮರುಗುವವನು ಎಂದು ನಾನು ತಿಳಿದೇ, ತಾರ್ಷೀಷಿಗೆ ಓಡಿಹೋಗಲು ಪ್ರಯತ್ನಿಸಿದ್ದು.
ಯೆಹೋವನೇ, ನಾನು ನಿನ್ನ ಸುದ್ದಿಯನ್ನು ಕೇಳಿ ಹೆದರಿದ್ದೇನೆ; ಯೆಹೋವನೇ, ಯುಗದ ಮಧ್ಯದಲ್ಲಿ ನಿನ್ನ ರಕ್ಷಣಾಕಾರ್ಯವನ್ನು ಪುನಃ ಮಾಡು, ಯುಗದ ಮಧ್ಯದಲ್ಲಿ ಅದನ್ನು ಪ್ರಸಿದ್ಧಿಪಡಿಸು; ನೀನು ರೋಷಗೊಂಡಿದ್ದರೂ ಕರುಣೆಯನ್ನು ಚಿತ್ತಕ್ಕೆ ತಂದುಕೋ.
ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ, ಇಲ್ಲಿಂದ ಹೊರಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬುದೇ ನನ್ನ ಅಭಿಲಾಷೆ, ಅದು ಅತ್ಯುತ್ತಮವಾಗಿದೆ.