ಮತ್ತು ದಾವೀದನು ದೇವರಿಗೆ, “ಜನರನ್ನು ಲೆಕ್ಕಿಸಬೇಕೆಂದು ಆಜ್ಞಾಪಿಸಿದವನು ನಾನಲ್ಲವೋ. ಮಹಾಪಾಪಮಾಡಿದವನು ನಾನೇ. ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ಯೆಹೋವನೇ, ನನ್ನ ದೇವರೇ, ನಿನ್ನ ಹಸ್ತವು ನಿನ್ನ ಜನರನ್ನು ಬಾಧಿಸುವುದಕ್ಕೆ ಅವರಿಗೆ ವಿರುದ್ಧವಾಗಿರದೆ ನನಗೂ ನನ್ನ ಮನೆಯವರಿಗೂ ವಿರುದ್ಧವಾಗಿರಲಿ” ಎಂದು ಬೇಡಿಕೊಂಡನು.