ಆಗ ಒರ್ನಾನನು ದಾವೀದನಿಗೆ, “ನನ್ನ ಒಡೆಯನಾದ ಅರಸನು ತನಗೆ ಇಷ್ಟವಾದದ್ದನ್ನು ತೆಗೆದುಕೊಂಡು ಯಜ್ಞಮಾಡೋಣವಾಗಲಿ. ಇಲ್ಲಿ ಯಜ್ಞಕ್ಕೆ ಹೋರಿಗಳೂ, ಸೌದೆಗೆ ಹಂತೀಕುಂಟೆಗಳೂ, ನೈವೇದ್ಯಕ್ಕೋಸ್ಕರ ಗೋದಿಯೂ ಇರುತ್ತವೆ. ಇವೆಲ್ಲವನ್ನೂ ಕೊಡುತ್ತೇನೆ” ಎಂದು ಹೇಳಿದನು.