1 ಸಮುವೇಲನು 6:14
TSK
ಬಂಡಿಯು ಬೇತ್ ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿದ್ದ ದೊಡ್ಡ ಕಲ್ಲಿನ ಬಳಿಯಲ್ಲಿ ಬಂದು ನಿಂತಿತು. ಆಗ ಅವರು ಹೋಗಿ ಬಂಡಿಯ ಕಟ್ಟಿಗೆಗಳನ್ನು ಸೀಳಿ, ಆ ಹಸುಗಳನ್ನು ಯೆಹೋವನಿಗೆ ಯಜ್ಞಮಾಡಿದರು.
TSK
Treasury of Scripture Knowledge references in ಕನ್ನಡ IRV.
ಬಂಡಿಯು ಬೇತ್ ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿದ್ದ ದೊಡ್ಡ ಕಲ್ಲಿನ ಬಳಿಯಲ್ಲಿ ಬಂದು ನಿಂತಿತು. ಆಗ ಅವರು ಹೋಗಿ ಬಂಡಿಯ ಕಟ್ಟಿಗೆಗಳನ್ನು ಸೀಳಿ, ಆ ಹಸುಗಳನ್ನು ಯೆಹೋವನಿಗೆ ಯಜ್ಞಮಾಡಿದರು.
ಎಲೀಷನು ಹಿಂದಿರುಗಿ ಹೋಗಿ ತಾನು ಉಳುತ್ತಿದ್ದ ಜೋಡಿ ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ವಧಿಸಿ ಮಾಂಸವನ್ನು ರಂಟೆಯ ಕಟ್ಟಿಗೆಯಿಂದ ಬೇಯಿಸಿ, ಜನರಿಗೆ ಔತಣಮಾಡಿಸಿದನು. ಅನಂತರ ಅವನು ಎದ್ದು ಎಲೀಯನನ್ನು ಹಿಂಬಾಲಿಸಿ ಅವನ ಸೇವಕನಾದನು.
ಬಳಿಕ ಯೆಹೋವನ ವಾಕ್ಯಾನುಸಾರ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕಾರಾಗೃಹದ ಅಂಗಳದಲ್ಲಿ ನನ್ನ ಬಳಿಗೆ ಬಂದು, “ಬೆನ್ಯಾಮೀನ್ ಸೀಮೆಯ ಅನಾತೋತಿನಲ್ಲಿರುವ ನನ್ನ ಹೊಲವನ್ನು ದಯಮಾಡಿ ಕೊಂಡುಕೋ, ಅದಕ್ಕೆ ನೀನೇ ಬಾಧ್ಯನು. ಪರಾಧೀನವಾಗದಂತೆ ಕೊಂಡುಕೊಳ್ಳುವ ಹಕ್ಕೂ ನಿನ್ನದೇ; ನಿನಗಾಗಿಯೇ ಕೊಂಡುಕೋ” ಎಂದು ಹೇಳಿದನು. ಕೂಡಲೆ ಇದು ಯೆಹೋವನ ನುಡಿ ಎಂದು ನನಗೆ ಗೊತ್ತಾಯಿತು.