TSK

TSK · 1 ಪೂರ್ವಕಾಲವೃತ್ತಾ 9:33

Treasury of Scripture Knowledge references in ಕನ್ನಡ IRV.

Back to passage

¶ ಆಗ ದಾವೀದನು ಲೇವಿಯರ ಪ್ರಧಾನರಿಗೆ, “ಗಾಯಕರಾದ ನಿಮ್ಮ ಸಹೋದರರನ್ನು ಸ್ವರಮಂಡಲ, ಕಿನ್ನರಿ, ತಾಳ ಮೊದಲಾದ ವಾದ್ಯಗಳಿಂದ ಉತ್ಸಾಹಧ್ವನಿ ಮಾಡುವುದಕ್ಕಾಗಿ ನೇಮಿಸಿರಿ” ಎಂದು ಆಜ್ಞಾಪಿಸಿದನು.

¶ ಆಮೇಲೆ ದಾವೀದನು ಮತ್ತು ಗುಡಾರದ ಸೇವೆ ಸಲ್ಲಿಸುತ್ತಿದ್ದ ಪ್ರಧಾನರು ಆಸಾಫ್ಯ, ಹೇಮಾನ್ಯ ಮತ್ತು ಯೆದುತೂನ್ಯರ ಮಕ್ಕಳನ್ನು ಸೇವೆ ಮಾಡುವುದಕ್ಕೋಸ್ಕರ ಆಯ್ಕೆಮಾಡಿದರು. ಇವರು ಕಿನ್ನರಿ, ಸ್ವರಮಂಡಲ, ತಾಳ, ಇವುಗಳನ್ನು ನುಡಿಸುತ್ತಾ, ಪ್ರವಾದಿಸುತ್ತ, ಗಾಯನಮಾಡುತ್ತಿದ್ದರು. ಆ ಸೇವೆಯನ್ನು ಮಾಡತಕ್ಕ ಪುರುಷರ ಪಟ್ಟಿ,

ಮೀಕನ ಮಗನೂ, ಜಬ್ದೀಯನ ಮೊಮ್ಮಗನೂ, ಆಸಾಫನ ಮರಿಮಗನೂ, ಪ್ರಾರ್ಥನೆಯ ಸಮಯದಲ್ಲಿ ಕೃತಜ್ಞತಾಸ್ತುತಿಯನ್ನು ಆರಂಭಿಸುತ್ತಾ ಆರಾಧನೆಯಲ್ಲಿ ಜನರನ್ನು ನಡೆಸುತ್ತಿದ್ದ ಮತ್ತನ್ಯ, ತನ್ನ ಬಂಧುಗಳಲ್ಲಿ ದ್ವಿತೀಯ ಸ್ಥಾನದವನಾದ ಬಕ್ಬುಕ್ಯ, ಶಮ್ಮೂವನ ಮಗನೂ, ಗಾಲಾಲನ ಮೊಮ್ಮಗನೂ, ಯೆದೂತೂನನ ಮರಿಮಗನೂ ಆದ ಅಬ್ದ ಎಂಬುವವರು,

ರಾತ್ರಿಯಲ್ಲಿ ಯೆಹೋವನ ಮಂದಿರದಲ್ಲಿರುವ ಆತನ ಸರ್ವಸೇವಕರೇ, ಬನ್ನಿರಿ, ಯೆಹೋವನನ್ನು ಕೊಂಡಾಡಿರಿ.