TSK

TSK · 1 ಯೋಹಾನನು 2:7

Treasury of Scripture Knowledge references in ಕನ್ನಡ IRV.

Back to passage

¶ “‘ನಿಮ್ಮ ಸ್ವಜನರಲ್ಲಿ ಯಾರಿಗೂ ಕೇಡಿಗೆ ಕೇಡನ್ನು ಮಾಡದೆ, ಮನಸ್ಸಿನಲ್ಲಿ ಮತ್ಸರವನ್ನು ಇಟ್ಟುಕೊಳ್ಳದೆ, ನಿಮ್ಮ ನೆರೆಯವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ನಾನು ಯೆಹೋವನು.

ನೀವು ನಿಮ್ಮ ದೇವರಾದ ಯೆಹೋವನನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ಮತ್ತು ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.

ಯೇಸು ಅವನಿಗೆ, ‹“‘ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು’›

ಅವರು ಅವನನ್ನು ಹಿಡಿದು ಅರಿಯೊಪಾಗಕ್ಕೆ ಕರೆದುಕೊಂಡು ಹೋಗಿ; “ನೀನು ಹೇಳುವ ಈ ಹೊಸ ಉಪದೇಶವನ್ನು ನಾವು ತಿಳಿದುಕೊಳ್ಳಬಹುದೇ?

¶ ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ದೇವರು ನಿಮ್ಮನ್ನು ಕರೆದನು. ಆದರೆ ನಿಮಗಿರುವ ಸ್ವಾತಂತ್ರ್ಯವನ್ನು ಶರೀರಾಧೀನ ಸ್ವಭಾವಕ್ಕೆ ಆಸ್ಪದವಾಗಿ ಬಳಸದೆ, ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.

ನೀವಂತೂ ಯಾವ ಬೋಧನೆಯನ್ನು ಮೊದಲಿನಿಂದ ಕೇಳಿದ್ದೀರೋ ಅದು ನಿಮ್ಮಲ್ಲಿ ನೆಲೆಗೊಂಡಿರಲಿ. ಮೊದಲಿನಿಂದ ನೀವು ಕೇಳಿದ್ದು ನಿಮ್ಮಲ್ಲಿ ನೆಲೆಗೊಂಡಿದ್ದರೆ ನೀವು ಸಹ ಮಗನಲ್ಲಿಯೂ ತಂದೆಯಾದ ದೇವರಲ್ಲಿಯೂ ನೆಲೆಗೊಂಡಿರುತ್ತೀರಿ.

ದೇವರ ಆಜ್ಞೆ ಯಾವುದೆಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನನ್ನು ನಂಬಿ ಆತನು ನಮಗೆ ಕೊಟ್ಟಿರುವ ಆಜ್ಞೆಗಳ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ.