TSK

TSK · 1 ಯೋಹಾನನು 3:6

Treasury of Scripture Knowledge references in ಕನ್ನಡ IRV.

Back to passage

ನಾವೆಲ್ಲರೂ ಮುಸುಕು ತೆಗೆದಿರುವ ಮುಖದಿಂದ ಕರ್ತನ ಪ್ರಭಾವವನ್ನು ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ನಾವೆಲ್ಲರೂ ಕರ್ತನ ದಾನವಾಗಿರುವ ಆತ್ಮದ ಮಹಿಮೆಯಿಂದ ಅಧಿಕ ಮಹಿಮೆಗೆ ಹೋಗುತ್ತಾ, ಆ ಮಹಿಮೆಯ ಸಾರೂಪ್ಯವುಳ್ಳವರೇ ಆಗುತ್ತೇವೆ. ಇದು ಆತ್ಮನಾಗಿರುವ ಕರ್ತನ ಕಾರ್ಯವೇ ಸರಿ.

ಒಬ್ಬನು, “ನಾನು ಆತನನ್ನು ಬಲ್ಲೆನು” ಎಂದು ಹೇಳಿ ಆತನ ಆಜ್ಞೆಗಳಂತೆ ನಡೆಯದಿದ್ದರೆ ಅವನು ಸುಳ್ಳುಗಾರನಾಗಿದ್ದಾನೆ. ಸತ್ಯವೆಂಬುದು ಅವನಲ್ಲಿ ಇಲ್ಲ.

ಪ್ರಿಯರೇ, ನಾವು ಈಗ ದೇವರ ಮಕ್ಕಳಾಗಿದ್ದೇವೆ. ಮುಂದೆ ನಾವು ಎಂಥವರಾಗಿರುತ್ತೆವೋ ಎಂಬುದು ಇನ್ನೂ ತಿಳಿದಿಲ್ಲ. ಆದರೆ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು. ಏಕೆಂದರೆ ಆತನಿರುವ ಪ್ರಕಾರವೇ ಆತನನ್ನು ನೋಡುವೆವು.

ಪ್ರೀತಿ ಇಲ್ಲದವನು ದೇವರನ್ನು ಬಲ್ಲವನಲ್ಲ. ಏಕೆಂದರೆ ದೇವರು ಪ್ರೀತಿಸ್ವರೂಪನಾಗಿದ್ದಾನೆ.

ಪ್ರಿಯನೇ, ನೀನು ಕೆಟ್ಟ ನಡತೆಯನ್ನು ಅನುಸರಿಸದೆ, ಒಳ್ಳೆಯ ನಡತೆಯನ್ನು ಅನುಸರಿಸು; ಒಳ್ಳೆಯದನ್ನು ಮಾಡುವವನು ದೇವರ ಮಗನಾಗಿರುತ್ತಾನೆ. ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ.