TSK

TSK · 1 ಯೋಹಾನನು 4:12

Treasury of Scripture Knowledge references in ಕನ್ನಡ IRV.

Back to passage

ಆದರೆ ಆತನು ಅವನಿಗೆ, “ನೀನು ನನ್ನ ಮುಖವನ್ನು ನೋಡುವುದಕ್ಕೆ ಸಾಧ್ಯವಿಲ್ಲ. ಏಕೆಂದರೆ ಮನುಷ್ಯರಲ್ಲಿ ಯಾರೂ ನನ್ನನ್ನು ನೋಡಿ ಬದುಕಿರಲಾರನು” ಎಂದು ಹೇಳಿದನು.

ದೇವರನ್ನು ಯಾರೂ ಎಂದೂ ನೋಡಿಲ್ಲ. ತಂದೆಯ ಹೃದಯದಲ್ಲಿರುವ ಏಕಪುತ್ರನೂ ಸ್ವತಃ ದೇವರೂ ಆಗಿರುವಾತನೇ, ತಂದೆಯನ್ನು ತಿಳಿಯಪಡಿಸಿದ್ದಾನೆ.

ಸರ್ವಯುಗಗಳ ಅರಸನೂ, ಅಮರನೂ, ಅದೃಶ್ಯನೂ ಆಗಿರುವ ಏಕ ದೇವರಿಗೆ ಘನವೂ ಮಹಿಮೆಯೂ ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್.

ನಂಬಿಕೆಯಿಂದಲೇ ಅವನು ಅರಸನ ರೌದ್ರಕ್ಕೆ ಭಯಪಡದೇ ಐಗುಪ್ತದೇಶವನ್ನು ಬಿಟ್ಟುಹೋದನು. ಏಕೆಂದರೆ ಅವನು ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನಂತೆ ದೃಢಚಿತ್ತನಾಗಿದ್ದನು.

ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ನೆಲೆಗೊಂಡಿರುತ್ತಾನೆ ಮತ್ತು ದೇವರು ಆತನಲ್ಲಿ ನೆಲೆಗೊಂಡಿರುತ್ತಾನೆ. ಆತನು ಅವನಲ್ಲಿ ನೆಲೆಗೊಂಡಿರುತ್ತಾನೆ. ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿರುವ ಆತ್ಮನಿಂದ ನಾವು ಬಲ್ಲವರಾಗಿದ್ದೇವೆ.

ನ್ಯಾಯತೀರ್ಪಿನ ದಿನದಲ್ಲಿ ನಾವು ಧೈರ್ಯದಿಂದಿರುವುದಕ್ಕಾಗಿ ಆತನ ಪ್ರೀತಿಯು ನಮ್ಮೊಳಗೆ ಪೂರ್ಣಗೊಂಡಿದೆ. ಈ ಲೋಕದಲ್ಲಿ ನಮ್ಮ ಬಾಳು ಕ್ರಿಸ್ತಯೇಸುವಿನ ಬಾಳಿನಂತೆ ಇರುವುದರಿಂದಲೇ ಆ ಭರವಸೆ ನಮಗೆ ಇರುತ್ತದೆ.