TSK

TSK · 1 ಅರಸುಗಳು 13:21

Treasury of Scripture Knowledge references in ಕನ್ನಡ IRV.

Back to passage

ಆಗ ಮೋಶೆ ಆರೋನನಿಗೆ, “ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನೆಂದರೆ, ‘ನಾನು ಪರಿಶುದ್ಧನೆಂಬುದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬುದೇ’” ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು.

“ಆರೋನನು ತನ್ನ ಪೂರ್ವಿಕರ ಬಳಿಗೆ ಸೇರುವನು. ನೀವಿಬ್ಬರೂ ಮೆರೀಬಾ ಪ್ರವಾಹದ ಹತ್ತಿರ ನನ್ನ ಮಾತಿಗೆ ವಿರುದ್ಧವಾಗಿ ತಿರುಗಿಬಿದ್ದುದರಿಂದ ನಾನು ಇಸ್ರಾಯೇಲರಿಗೆ ವಾಗ್ದಾನಮಾಡಿದ ದೇಶದೊಳಗೆ ಆರೋನನು ಸೇರಬಾರದು.

ಆಗ ಸಮುವೇಲನು, “ನೀನು ಬುದ್ಧಿಹೀನಕಾರ್ಯವನ್ನು ಮಾಡಿದೆ; ನೀನು ನಿನ್ನ ದೇವರಾದ ಯೆಹೋವನ ಆಜ್ಞೆಯನ್ನು ಕೈಕೊಳ್ಳಲಿಲ್ಲ. ಕೈಕೊಂಡಿದ್ದರೆ ಆತನು ನಿನ್ನ ರಾಜ್ಯವನ್ನು ಇಸ್ರಾಯೇಲ್ಯರಲ್ಲಿ ಶಾಶ್ವತವಾಗಿ ಸ್ಥಿರಪಡಿಸುತ್ತಿದ್ದನು.

ಅದಕ್ಕೆ ಸಮುವೇಲನು, “ಯೆಹೋವನು ವಿಧೇಯತ್ವವನ್ನು ಮೆಚ್ಚುವಷ್ಟು ಯಜ್ಞಹೋಮಗಳಿಗೆ ಮೆಚ್ಚುತ್ತಾನೋ? ಯಜ್ಞವನ್ನರ್ಪಿಸುವುದಕ್ಕಿಂತ ಆತನ ಆಜ್ಞಾಪಾಲನೆ ಉತ್ತಮವಾಗಿದೆ; ಟಗರುಗಳ ಕೊಬ್ಬಿಗಿಂತ ವಿಧೇಯತೆ ವಿಶಿಷ್ಟವಾದುದು.

ಹೀಗಿರಲು ನೀನು ಯೆಹೋವನಾದ ನನ್ನ ಆಜ್ಞೆಯನ್ನು ತಿರಸ್ಕರಿಸಿ, ನನ್ನ ದೃಷ್ಟಿಯಲ್ಲಿ ಅನೀತಿಯನ್ನು ಕೆಟ್ಟದ್ದಾಗಿರುವುದನ್ನು ಮಾಡಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡಿರುವೆ.

ಇಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದೂ, ಬಂದ ದಾರಿಯನ್ನು ಬಿಟ್ಟು ಬೇರೆ ದಾರಿಯಿಂದ ಹಿಂದಿರುಗಿ ಹೋಗಬೇಕೆಂದು ನನಗೆ ಯೆಹೋವನ ಅಪ್ಪಣೆಯಾಗಿದೆ” ಎಂದು ಉತ್ತರಕೊಟ್ಟನು.

ಆಗ ಅವನ ಪಂಡಿತರೂ ಮತ್ತು ಹೆಂಡತಿಯೂ ಅವನಿಗೆ, “ಯಾವನ ಮುಂದೆ ನಿನ್ನ ಸೋಲು ಪ್ರಾರಂಭವಾಯಿತೋ ಆ ಮನುಷ್ಯನು ಯೆಹೂದ ಸಂತಾನದವನಾಗಿದ್ದರೆ ನೀನು ಗೆಲ್ಲಲಾರಿ, ಅವನ ಮುಂದೆ ಬಿದ್ದು ಹಾಳಾಗುವಿ” ಅಂದರು.

ಆದರೂ ನಾವು ನಿಮಗೆ ಸಾರಿದ ಸುವಾರ್ತೆಗೆ ವಿರುದ್ಧವಾದದ್ದನ್ನು, ನಾವೇ ಆಗಲಿ ಅಥವಾ ಪರಲೋಕದಿಂದ ಬಂದ ದೇವದೂತನೇ ಆಗಲಿ, ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ.