TSK

TSK · 1 ಸಮುವೇಲನು 13:23

Treasury of Scripture Knowledge references in ಕನ್ನಡ IRV.

Back to passage

ಅವನು ಇಸ್ರಾಯೇಲರಿಂದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡನು, ಅವರಲ್ಲಿ ಎರಡು ಸಾವಿರ ಜನರು ಅವನೊಂದಿಗೆ ಮಿಕ್ಮಾಷಿನಲ್ಲಿಯೂ, ಬೇತೇಲಿನ ಗುಡ್ಡದಲ್ಲಿಯೂ ಇದ್ದರು. ಒಂದು ಸಾವಿರ ಜನರನ್ನು ಬೆನ್ಯಾಮೀನ್ಯರ ಗಿಬೆಯದಲ್ಲಿದ್ದ ಯೋನಾತಾನನ ವಶಕ್ಕೆ ಕೊಟ್ಟನು. ಉಳಿದ ಇಸ್ರಾಯೇಲರನ್ನು ಅವರವರ ಮನೆಗಳಿಗೆ ಕಳುಹಿಸಿದನು.

¶ ಒಂದು ದಿನ ಸೌಲನ ಮಗನಾದ ಯೋನಾತಾನನು ತನ್ನ ಆಯುಧಗಳನ್ನು ಹೊರುವ ಸೇವಕನಿಗೆ, “ಆಚೆ ಇರುವ ಫಿಲಿಷ್ಟಿಯರ ಕಾವಲುದಂಡಿಗೆ ವಿರೋಧವಾಗಿ ಹೋಗೋಣ ಬಾ” ಎಂದು ಹೇಳಿದನು. ಆದರೆ ಈ ಸಂಗತಿಯನ್ನು ತನ್ನ ತಂದೆಗೆ ತಿಳಿಸಲಿಲ್ಲ.

ದಾವೀದನು ಆ ಅದುಲ್ಲಾಮ್ ದುರ್ಗದಲ್ಲಿದ್ದನು. ಫಿಲಿಷ್ಟಿಯರು ಬೇತ್ಲೆಹೇಮಿನಲ್ಲಿ ಕಾವಲುದಂಡನ್ನಿಟ್ಟಿದ್ದರು.

ಕಣಿವೆಯನ್ನು ದಾಟಿದ್ದಾರೆ, ಗೆಬದಲ್ಲಿ ದಂಡಿಳಿಸುವ ಅನ್ನುತ್ತಾರೆ. ರಾಮಾ ನಡುಗುತ್ತದೆ, ಸೌಲನ ಗಿಬೆಯು ಓಡಿಹೋಯಿತು.