TSK

TSK · 1 ಸಮುವೇಲನು 14:39

Treasury of Scripture Knowledge references in ಕನ್ನಡ IRV.

Back to passage

¶ ಆ ದಿನ ಸೌಲನು ಇಸ್ರಾಯೇಲರನ್ನು ಕುರಿತು, “ಶತ್ರುಗಳಿಗೆ ಮುಯ್ಯಿತೀರಿಸುವುದಕ್ಕೋಸ್ಕರ ನಿಮ್ಮಲ್ಲಿ ಒಬ್ಬನಾದರೂ ಸಾಯಂಕಾಲದವರೆಗೆ ಊಟಮಾಡಬಾರದು; ಮಾಡಿದವನು ಶಾಪಗ್ರಸ್ತನಾಗಲಿ” ಎಂದು ಆಣೆಯಿಟ್ಟಿದ್ದರಿಂದ ಅಂದು ಅವರೆಲ್ಲರೂ ಬಹುವಾಗಿ ಬಳಲಿಹೋಗಿದ್ದರೂ ಒಬ್ಬನಾದರೂ ಆಹಾರ ಪಧಾರ್ಥವನ್ನು ರುಚಿಸಿ ನೋಡಿರಲಿಲ್ಲ.

ಸೌಲನು ಯೋನಾತಾನನ ಮಾತುಗಳನ್ನು ಲಾಲಿಸಿ, “ಯೆಹೋವನಾಣೆ, ಅವನನ್ನು ಕೊಲ್ಲುವುದಿಲ್ಲ” ಎಂದು ಪ್ರಮಾಣಮಾಡಿದನು.

ಆಗ ಅರಸನು ಅವನಿಗೆ, “ಅಹೀಮೆಲೆಕನೇ ನೀನೂ ನಿನ್ನ ಮನೆಯವರೂ ಸಾಯಲೇ ಬೇಕು” ಎಂದು ಹೇಳಿ ತನ್ನ ಬಳಿಯಲ್ಲಿದ್ದ

ಇದನ್ನು ಕೇಳಿ ದಾವೀದನು ಆ ಮನುಷ್ಯನ ಮೇಲೆ ಬಹಳವಾಗಿ ಕೋಪಗೊಂಡು ನಾತಾನನಿಗೆ, “ಯೆಹೋವನ ಆಣೆ, ಆ ಮನುಷ್ಯನು ಸಾಯಲೇಬೇಕು.

¶ ಎಲ್ಲವುಗಳು ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವುದು. ನೀತಿವಂತನಿಗೂ ಮತ್ತು ದುಷ್ಟನಿಗೂ, ಒಳ್ಳೆಯವನಿಗೂ ಮತ್ತು ಕೆಟ್ಟವನಿಗೂ, ಶುದ್ಧನಿಗೂ ಮತ್ತು ಅಶುದ್ಧನಿಗೂ, ಯಜ್ಞವನ್ನು ಅರ್ಪಿಸುವವನಿಗೂ ಮತ್ತು ಅರ್ಪಿಸದವನಿಗೂ ಒಂದೇ ಗತಿಯಾಗುವುದು. ಒಳ್ಳೆಯವನು ಹೇಗೋ ಹಾಗೆಯೇ ಪಾಪಿಯೂ ಇರುವನು. ಆಣೆಯಿಡುವವನು ಹೇಗೋ ಹಾಗೆಯೇ ಆಣೆಗೆ ಭಯಪಡುವವನೂ ಇರುವನು.