TSK

TSK · 1 ಸಮುವೇಲನು 2:4

Treasury of Scripture Knowledge references in ಕನ್ನಡ IRV.

Back to passage

ದುಷ್ಟರ ತೋಳುಗಳು ಮುರಿದುಹೋಗುವವು; ನೀತಿವಂತರನ್ನು ಯೆಹೋವನೇ ಉದ್ಧರಿಸುವನು.

“ಕಾದಾಡುವುದನ್ನು ನಿಲ್ಲಿಸಿರಿ, ನಾನೇ ದೇವರು; ಲೋಕದ ಸಮಸ್ತ ಜನಗಳಿಗೂ ಸರ್ವಾಧಿಪತಿಯು ನಾನೇ ಎಂದು ತಿಳಿಯಿರಿ” ಎಂದು ಹೇಳಿದ್ದಾನೆ.

ಕೈದಿಗಳ ಕಾಲ ಕೆಳಗೆ ಮುದುರಿಕೊಂಡು, ಹತರಾದವರ ಕೆಳಗೆ ಬಿದ್ದಿರುವುದೇ ಇವರ ಗತಿ. ಏಕೆಂದರೆ ಇಷ್ಟೆಲ್ಲಾ ನಡೆದರೂ ಯೆಹೋವನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇರುವುದು.

ನಿಮ್ಮನ್ನು ಪ್ರತಿಭಟಿಸುವ ಕಸ್ದೀಯರಲ್ಲಿ ಗಾಯಪಟ್ಟವರು ಮಾತ್ರ ಉಳಿಯುವಂತೆ ನೀವು ಆ ಸೈನ್ಯವನ್ನೆಲ್ಲಾ ಒಂದು ವೇಳೆ ಹೊಡೆದಿದ್ದರೂ ಆ ಗಾಯಪಟ್ಟವರೇ ತಮ್ಮ ತಮ್ಮ ಗುಡಾರಗಳಿಂದ ಎದ್ದು ಬಂದು ಈ ಪಟ್ಟಣವನ್ನು ಬೆಂಕಿಯಿಂದ ಸುಟ್ಟು ಬಿಡುತ್ತಿದ್ದರು.”

ಹಿಂಸೆಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ. ಕೆಡವಲ್ಪಟ್ಟವರಾಗಿದ್ದರೂ ನಶಿಸಿಹೊಗುವವರಲ್ಲ.

ಸತ್ಯವೆಂಬ ನಡುಕಟ್ಟನ್ನು ಸೊಂಟಕ್ಕೆ ಕಟ್ಟಿಕೊಂಡು, ನೀತಿಯೆಂಬ ಎದೆಕವಚವನ್ನು ಧರಿಸಿಕೊಂಡು,

ಬೆಂಕಿಯ ಶಕ್ತಿಯನ್ನು ನಂದಿಸಿದರು, ಕತ್ತಿಯ ಬಾಯಿಂದ ತಪ್ಪಿಸಿಕೊಂಡರು, ದುರ್ಬಲರಾಗಿದ್ದು ಬಲಿಷ್ಠರಾದರು, ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು, ಪರದೇಶದವರ ಸೈನ್ಯಗಳನ್ನು ಓಡಿಸಿಬಿಟ್ಟರು.