TSK

TSK · 1 ಸಮುವೇಲನು 26:21

Treasury of Scripture Knowledge references in ಕನ್ನಡ IRV.

Back to passage

ಆಗ ಫರೋಹನು ಮೋಶೆ ಆರೋನರನ್ನು ಕರೆಯಿಸಿ ಅವರಿಗೆ, “ನಾನು ಅಪರಾಧಿಯೆಂದು ಈಗ ಒಪ್ಪಿಕೊಳ್ಳುತ್ತೇನೆ. ಯೆಹೋವನು ನ್ಯಾಯವಂತನು. ನಾನೂ ನನ್ನ ಜನರೂ ದೋಷಿಗಳು.

ಆಗ ಸಮುವೇಲನು, “ನೀನು ಬುದ್ಧಿಹೀನಕಾರ್ಯವನ್ನು ಮಾಡಿದೆ; ನೀನು ನಿನ್ನ ದೇವರಾದ ಯೆಹೋವನ ಆಜ್ಞೆಯನ್ನು ಕೈಕೊಳ್ಳಲಿಲ್ಲ. ಕೈಕೊಂಡಿದ್ದರೆ ಆತನು ನಿನ್ನ ರಾಜ್ಯವನ್ನು ಇಸ್ರಾಯೇಲ್ಯರಲ್ಲಿ ಶಾಶ್ವತವಾಗಿ ಸ್ಥಿರಪಡಿಸುತ್ತಿದ್ದನು.

ಅದಕ್ಕೆ ಸೌಲನು, “ನಾನು ಪಾಪಮಾಡಿದ್ದೇನೆ; ದಯವಿಟ್ಟು ಇಸ್ರಾಯೇಲರ ಮುಂದೆಯೂ, ಜನರ ಮುಂದೆಯೂ ಹಿರಿಯರ ಮುಂದೆಯೂ ನನ್ನ ಮಾನವನ್ನುಳಿಸು. ನಾನು ನಿನ್ನ ದೇವರಾದ ಯೆಹೋವನನ್ನು ಆರಾಧಿಸುವಂತೆ ಹಿಂದಿರುಗಿ ನನ್ನ ಜೊತೆಯಲ್ಲಿ ಬಾ” ಎಂದು ಬೇಡಿಕೊಂಡನು.

ಇದಲ್ಲದೆ ಅವನು ದಾವೀದನಿಗೆ, “ನೀನು ನನಗಿಂತ ನೀತಿವಂತನೂ. ನಾನು ನಿನಗೆ ಕೇಡುಮಾಡಿದರೂ ನೀನು ನನಗೆ ಒಳ್ಳೆಯದನ್ನೇ ಮಾಡಿದಿ.

ದಾವೀದನು ತಪ್ಪಿಸಿಕೊಂಡು ಗತ್ ಊರಿಗೆ ಹೋದನೆಂಬ ವರ್ತಮಾನವನ್ನು ಸೌಲನು ಕೇಳಿದ ಮೇಲೆ ಅವನನ್ನು ಹುಡುಕಲೇ ಇಲ್ಲ.

ಆಕಾಶದಿಂದ ಬೆಂಕಿಬಿದ್ದು ಮೊದಲು ಬಂದ ಇಬ್ಬರು ಪಂಚದಶಾಧಿಪತಿಗಳನ್ನೂ, ಅವರ ಸಿಪಾಯಿಗಳನ್ನೂ ದಹಿಸಿಬಿಟ್ಟಿತಲ್ಲಾ, ನನ್ನ ಪ್ರಾಣವಾದರೂ ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದೆಂದು ಎಣಿಸಲ್ಪಡಲಿ” ಎಂದು ಬೇಡಿಕೊಂಡನು.

ಯೆಹೋವನು ತನ್ನ ಭಕ್ತರ ಮರಣವನ್ನು ಅಲ್ಪವೆಂದು ಎಣಿಸುವುದಿಲ್ಲ.