TSK

TSK · 1 ತಿಮೊಥೆಯನಿಗೆ 3:1

Treasury of Scripture Knowledge references in ಕನ್ನಡ IRV.

Back to passage

‹ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯದಲ್ಲಿ ದೇವದೂತರ ಮುಂದೆ ಸಂತೋಷವಾಗುವುದೆಂದು ನಿಮಗೆ ಹೇಳುತ್ತೇನೆ”› ಅಂದನು.

ಕರ್ತನು ತನ್ನ ಸ್ವಂತ ರಕ್ತದಿಂದ ಸಂಪಾದಿಸಿಕೊಂಡ ದೇವರ ಸಭೆಯನ್ನು ಪರಿಪಾಲಿಸುವುದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಗುಂಪಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವುದರಿಂದ ನಿಮ್ಮ ವಿಷಯದಲ್ಲಿಯೂ, ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.

ನಾವೆಲ್ಲರೂ ನಂಬಿಕೆಯಿಂದಲೂ ದೇವಕುಮಾರನ ವಿಷಯವಾದ ಜ್ಞಾನದಿಂದಲೂ ಉಂಟಾಗುವ ಐಕ್ಯತೆಯನ್ನು ಹೊಂದಿ, ಪರಿಪಕ್ವತೆಯನ್ನು ಪಡೆದು, ಕ್ರಿಸ್ತನ ಪರಿಪೂರ್ಣತೆಯ ಮಟ್ಟವನ್ನು ತಲುಪುವ ತನಕ,

¶ ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ, ಮನಗುಂದಿದವರನ್ನು ಧೈರ್ಯಪಡಿಸಿರಿ, ಬಲಹೀನರಿಗೆ ಆಧಾರವಾಗಿರಿ, ಎಲ್ಲರೊಂದಿಗೆ ದೀರ್ಘಶಾಂತಿಯಿಂದಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.

ಸಭಾಧ್ಯಕ್ಷನು ದೋಷಾರೋಪಣೆಯಿಲ್ಲದವನೂ, ಏಕಪತ್ನಿಯುಳ್ಳವನೂ, ಶಾಂತನೂ, ಜಿತೇಂದ್ರಿಯನೂ, ಮಾನಸ್ಥನೂ, ಅತಿಥಿಸತ್ಕಾರಮಾಡುವವನೂ, ಬೋಧಿಸಲು ಶಕ್ತನಾಗಿರಬೇಕು.

ಈ ಮಾತು ನಂಬತಕ್ಕದ್ದಾಗಿದೆ, ಅದೇನೆಂದರೆ “ನಾವು ಆತನೊಡನೆ ಸತ್ತಿದ್ದರೆ ಆತನೊಡನೆ ಜೀವಿಸುವೆವು,

ಇದು ನಂಬತಕ್ಕ ಮಾತಾಗಿದೆ; ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವುದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಎಲ್ಲಾ ಮಾತುಗಳನ್ನು ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಅದು ಉತ್ತಮವೂ, ಮನುಷ್ಯರಿಗೆ ಪ್ರಯೋಜನಕಾರಿಯೂ ಆಗಿವೆ.

¶ ನನ್ನ ಸಹೋದರರೇ, ನಿಮ್ಮಲ್ಲಿ ಯಾರಾದರು ಸತ್ಯ ಮಾರ್ಗವನ್ನು ಬಿಟ್ಟು ತಪ್ಪಿ ನಡೆಯುತ್ತಿದ್ದರೆ ಮತ್ತೊಬ್ಬನು ಅವನನ್ನು ಸನ್ಮಾರ್ಗಕ್ಕೆ ತಂದರೆ;

ನಿಮ್ಮಲ್ಲಿ ಯಾವನಾದರು ಕೊಲೆಗಾರನು, ಕಳ್ಳನು, ದುಷ್ಟನು, ಪರರ ಕಾರ್ಯಗಳಲ್ಲಿ ತಲೆಹಾಕುವವನು ಆಗಿದ್ದು ಶಿಕ್ಷಾಪಾತ್ರನಾಗಬಾರದು.