TSK

TSK · 2 ಪೂರ್ವಕಾಲವೃತ್ತಾ 11:17

Treasury of Scripture Knowledge references in ಕನ್ನಡ IRV.

Back to passage

¶ ದಾವೀದನ ಮಗನಾದ ಸೊಲೊಮೋನನು ತನ್ನ ರಾಜ್ಯದಲ್ಲಿ ಸಂಪೂರ್ಣ ಪ್ರಭುತ್ವ ಹೊಂದಿದನು. ಅವನ ದೇವರಾದ ಯೆಹೋವನು ಅವನ ಸಂಗಡ ಇದ್ದು ಅವನನ್ನು ಬಲಾಢ್ಯನಾಗುವಂತೆ ಆಶೀರ್ವದಿಸಿ ನಡೆಸಿದನು.

ಮೋಶೆಯ ಆಜ್ಞೆಯಂತೆ ಸಬ್ಬತ್ ದಿನ, ಅಮಾವಾಸ್ಯೆ, ವಾರೋತ್ಸವ ಜಾತ್ರೆ ಇವುಗಳಲ್ಲಿಯೂ ಹುಳಿಯಿಲ್ಲದ ರೊಟ್ಟಿಗಳ ಹಬ್ಬ, ಪಂಚಾಶತ್ತಮ ದಿನದ ಹಬ್ಬ, ಪರ್ಣಶಾಲೆ ಹಬ್ಬ ಎಂಬ ಮೂರು ವಾರ್ಷಿಕ ಹಬ್ಬಗಳಲ್ಲಿಯೂ ಆಯಾ ದಿನಗಳಿಗೆ ನೇಮಕವಾದ ಯಜ್ಞಗಳನ್ನು ಸಮರ್ಪಿಸುತ್ತಿದ್ದನು.

ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತಿದ್ದಲಿ? ಯೆಹೂದವೇ, ನಿನ್ನನ್ನು ಹೇಗೆ ಸರಿಮಾಡಲಿ? ನಿಮ್ಮ ಭಕ್ತಿಯು ಪ್ರಾತಃಕಾಲದ ಮೋಡಕ್ಕೂ, ಬೇಗನೆ ಮಾಯವಾಗುವ ಇಬ್ಬನಿಗೂ ಸಮಾನವಾಗಿದೆ.