TSK

TSK · 2 ಪೂರ್ವಕಾಲವೃತ್ತಾ 12:9

Treasury of Scripture Knowledge references in ಕನ್ನಡ IRV.

Back to passage

ಅರಸನಾದ ಸೊಲೊಮೋನನು ಬಂಗಾರದ ತಗಡಿನಿಂದ ಇನ್ನೂರು ಗುರಾಣಿಗಳನ್ನು ಮಾಡಿಸಿದನು. ಪ್ರತಿಯೊಂದು ಗುರಾಣಿಗೆ ಆರುನೂರು ತೊಲಾ ಬಂಗಾರ ಹಿಡಿಯಿತು.

ಆಗ ಆಸನು ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿ ಉಳಿದಿದ್ದ ಬೆಳ್ಳಿ ಮತ್ತು ಬಂಗಾರವನ್ನು ತೆಗೆದುಕೊಂಡು, ಅದನ್ನು ದೂತರ ಮುಖಾಂತರವಾಗಿ ದಮಸ್ಕದಲ್ಲಿದ್ದ ಅರಾಮ್ಯರ ಅರಸನೂ, ಹೆಜ್ಯೋನನ ಮೊಮ್ಮಗನೂ, ಟಬ್ರಿಮ್ಮೋನನ ಮಗನೂ ಆದ ಬೆನ್ಹದದನಿಗೆ ಕೊಟ್ಟು ಕಳುಹಿಸಿದನು.

ಆಗ ಹಿಜ್ಕೀಯನು ಯೆಹೋವನ ಆಲಯದಲ್ಲಿಯೂ, ಅರಸನ ಅರಮನೆಯ ಭಂಡಾರದಲ್ಲಿಯೂ ಸಿಕ್ಕಿದ ಬೆಳ್ಳಿಯನ್ನು ಅವನಿಗೆ ಕೊಟ್ಟನು.

ವಿರೋಧಿಯು ಕೈಚಾಚಿ ಅವಳ ಭೋಗ್ಯವಸ್ತುಗಳನ್ನೆಲ್ಲಾ ಬಾಚಿಬಿಟ್ಟನು; “ಮ್ಲೇಚ್ಛರು ನಿನ್ನ ಸಭೆಗೆ ಸೇರಬಾರದು” ಎಂದು ನೀನು ಆಜ್ಞಾಪಿಸಿದರೂ ಅಂಥವರೇ ತನ್ನಲ್ಲಿನ ಪವಿತ್ರಾಲಯದೊಳಗೆ ಸೇರುವುದನ್ನು ಆಕೆಯು ಕಾಣಬೇಕಾಯಿತು.