TSK

TSK · 2 ಪೂರ್ವಕಾಲವೃತ್ತಾ 13:14

Treasury of Scripture Knowledge references in ಕನ್ನಡ IRV.

Back to passage

ನೀವು ಸ್ವದೇಶವನ್ನು ಸೇರಿದ ಮೇಲೆ ನಿಮ್ಮನ್ನು ಉಪದ್ರವಪಡಿಸುವ ಶತ್ರುಗಳನ್ನು ಎದುರಿಸುವುದಕ್ಕಾಗಿ ಯುದ್ಧಕ್ಕೆ ಹೊರಡುವಾಗ ಆ ತುತ್ತೂರಿಗಳನ್ನು ಆರ್ಭಟವಾಗಿ ಊದಿಸಬೇಕು. ಆಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಜ್ಞಾಪಕಕ್ಕೆ ತಂದುಕೊಂಡು ಶತ್ರುಗಳ ಕೈಯಿಂದ ರಕ್ಷಿಸುವನು.

ತಾವು ಮೊದಲು ನಿಂತ ಸ್ಥಳದಿಂದ ಓಡತೊಡಗಿದರು. ಬಾಳ್‌ತಾಮರಿಗೆ ಮುಟ್ಟಿದ ಕೂಡಲೆ ಅಲ್ಲಿ ನಿಂತು ತಿರುಗಿ ಯುದ್ಧವನ್ನು ಪ್ರಾರಂಭಿಸಿದರು. ಅಷ್ಟರಲ್ಲಿ ಹೊಂಚಿ ನೋಡುತ್ತಿದ್ದವರು ತಾವು ಅಡಗಿಕೊಂಡಿದ್ದ ಗಿಬೆಯದ ಮೈದಾನದಿಂದ ಎದ್ದು

¶ ಯೋವಾಬನು ತನ್ನ ಮುಂದೆಯೂ, ಹಿಂದೆಯೂ ಯುದ್ಧ ಪ್ರಾರಂಭವಾದದ್ದನ್ನು ಕಂಡು ಇಸ್ರಾಯೇಲ್ಯರಲ್ಲಿ ಶ್ರೇಷ್ಠರಾದ ಸೈನಿಕರನ್ನು ಆರಿಸಿಕೊಂಡು, ಅವರನ್ನು ಅರಾಮ್ಯರಿಗೆ ವಿರೋಧವಾಗಿ ನಿಲ್ಲಿಸಿದನು.

ಆಸನು ತನ್ನ ದೇವರಾದ ಯೆಹೋವನಿಗೆ, “ಯೆಹೋವನೇ, ಬಲಿಷ್ಠನು ಬಲಹೀನನ ಮೇಲೆ ಬೀಳುವಲ್ಲಿ, ರಕ್ಷಿಸಲು ನಿನ್ನ ಹೊರತು ಬೇರಾರೂ ರಕ್ಷಿಸುವುದಿಲ್ಲ. ನಮ್ಮ ದೇವರಾದ ಯೆಹೋವನೇ, ನಮ್ಮನ್ನು ರಕ್ಷಿಸು. ನಿನ್ನಲ್ಲಿ ಭರವಸವಿಟ್ಟು ನಿನ್ನ ಹೆಸರಿನಲ್ಲಿ ಈ ಮಹಾಸಮೂಹಕ್ಕೆ ವಿರೋಧವಾಗಿ ಯುದ್ಧಕ್ಕೆ ಬಂದೆವಲ್ಲಾ. ಯೆಹೋವನೇ, ನಮ್ಮ ದೇವರು ನೀನು. ನರರು ನಿನ್ನೆದುರು ಗೆಲ್ಲಬಾರದು” ಎಂದು ಮೊರೆಯಿಡಲು.

¶ ಈ ಕಾರಣದಿಂದ ಅರಸನಾದ ಹಿಜ್ಕೀಯನು ಹಾಗು ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯು ಪರಲೋಕದ ದೇವರಿಗೆ ಮೊರೆಯಿಟ್ಟು ಪ್ರಾರ್ಥಿಸಿದರು.

ರಾತ್ರಿಯಲ್ಲಿ ಭಯಹುಟ್ಟಿಸುವ ಯಾವುದಕ್ಕೂ, ಹಗಲಲ್ಲಿ ಹಾರಿಬರುವ ಬಾಣಕ್ಕೂ,