TSK

TSK · 2 ಪೂರ್ವಕಾಲವೃತ್ತಾ 13:15

Treasury of Scripture Knowledge references in ಕನ್ನಡ IRV.

Back to passage

ಏಳನೆಯ ಸಾರಿ ಸುತ್ತುವಾಗ ಯಾಜಕರು ಕೊಂಬುಗಳನ್ನು ಊದಲು ಯೆಹೋಶುವನು ಜನರಿಗೆ, “ಆರ್ಭಟಿಸಿರಿ, ಯೆಹೋವನು ನಿಮಗೆ ಈ ಪಟ್ಟಣವನ್ನು ಕೊಟ್ಟಿದ್ದಾನೆ.

ಯೆಹೋವನು ಅವರನ್ನು ಇಸ್ರಾಯೇಲರ ಕೈಗೆ ಒಪ್ಪಿಸಿದನು. ಇವರು ಅವರನ್ನು ದೊಡ್ಡ ಚೀದೋನ್ ಹಾಗೂ ಮಿಸ್ರೆಫೋತ್ಮಯಿಮ್ ಎಂಬ ಊರುಗಳವರೆಗೂ ಪೂರ್ವದಿಕ್ಕಿನಲ್ಲಿರುವ ಮಿಚ್ಪೆಯ ಬೈಲಿನವರೆಗೂ ಅವರನ್ನು ಹಿಂದಟ್ಟಿ ಹೊಡೆದರು. ಒಬ್ಬನಾದರೂ ಉಳಿಯದಂತೆ ಎಲ್ಲರನ್ನೂ ಸಂಹರಿಸಿದರು.

ನಾನೂ ನನ್ನ ಸಂಗಡ ಇದ್ದವರೂ ಕೊಂಬುಗಳನ್ನು ಊದಲು ನೀವೂ ಪಾಳೆಯದ ಸುತ್ತಲೂ ಕೊಂಬನ್ನು ಊದಿ, ‘ಯೆಹೋವನಿಗೆ ಜಯ, ಗಿದ್ಯೋನನಿಗೆ ಜಯ ಎಂದು ಕೂಗಿರಿ’” ಎಂದು ಹೇಳಿದನು.

ಆಸನು ತನ್ನ ದೇವರಾದ ಯೆಹೋವನಿಗೆ, “ಯೆಹೋವನೇ, ಬಲಿಷ್ಠನು ಬಲಹೀನನ ಮೇಲೆ ಬೀಳುವಲ್ಲಿ, ರಕ್ಷಿಸಲು ನಿನ್ನ ಹೊರತು ಬೇರಾರೂ ರಕ್ಷಿಸುವುದಿಲ್ಲ. ನಮ್ಮ ದೇವರಾದ ಯೆಹೋವನೇ, ನಮ್ಮನ್ನು ರಕ್ಷಿಸು. ನಿನ್ನಲ್ಲಿ ಭರವಸವಿಟ್ಟು ನಿನ್ನ ಹೆಸರಿನಲ್ಲಿ ಈ ಮಹಾಸಮೂಹಕ್ಕೆ ವಿರೋಧವಾಗಿ ಯುದ್ಧಕ್ಕೆ ಬಂದೆವಲ್ಲಾ. ಯೆಹೋವನೇ, ನಮ್ಮ ದೇವರು ನೀನು. ನರರು ನಿನ್ನೆದುರು ಗೆಲ್ಲಬಾರದು” ಎಂದು ಮೊರೆಯಿಡಲು.

ಆ ನಂತರ ಅವನು ಜನರೊಂದಿಗೆ ಸಮಾಲೋಚನೆ ಮಾಡಿ ಯೆಹೋವನನ್ನು ಸ್ತುತಿಸಿ ಹಾಡುವುದಕ್ಕಾಗಿ ಕೆಲವರನ್ನು ಆರಿಸಿಕೊಂಡು ಅವರಿಗೆ, “ಪರಿಶುದ್ಧವಸ್ತ್ರ ಅಲಂಕಾರ ಭೂಷಣದೊಡನೆ ಭಟರ ಮುಂದೆ ಹೋಗುತ್ತಾ, ‘ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ, ಆತನ ಕೃಪೆಯು ಶಾಶ್ವತವಾದದ್ದು’ ಎಂದು ಭಜಿಸಿರಿ” ಎಂಬುದಾಗಿ ಆಜ್ಞಾಪಿಸಿದನು.

ಸರ್ವಜನಾಂಗದವರೇ, ಚಪ್ಪಾಳೆ ಹೊಡೆಯಿರಿ; ಆರ್ಭಟದಿಂದ ದೇವರಿಗೆ ಜಯಧ್ವನಿ ಮಾಡಿರಿ.