TSK

TSK · 2 ಪೂರ್ವಕಾಲವೃತ್ತಾ 18:30

Treasury of Scripture Knowledge references in ಕನ್ನಡ IRV.

Back to passage

ನ್ಯಾಯವಿಚಾರಣೆ ಮಾಡುವಾಗ ಮುಖದಾಕ್ಷಿಣ್ಯಮಾಡದೆ, ಪ್ರಮುಖರನ್ನೂ ಹಾಗು ಅಲ್ಪರನ್ನೂ ಸಮಾನವಾಗಿ ಕಾಣಬೇಕು. ನೀವು ದೇವರ ಹೆಸರಿನಲ್ಲಿ ನ್ಯಾಯತೀರಿಸುವವರಾದ ಕಾರಣ ಮನುಷ್ಯರ ಮುಖವನ್ನು ನೋಡಿ ಹೆದರಬೇಡಿರಿ. ನೀವು ತೀರಿಸಲಿಕ್ಕೆ ಆಗದ ವ್ಯಾಜ್ಯಗಳನ್ನು ನನ್ನ ಬಳಿಗೆ ತರಬೇಕು; ನಾನೇ ಅವುಗಳನ್ನು ತೀರಿಸುವೆನು” ಎಂದು ಹೇಳಿದೆನು.

ಆಗ ಪ್ರವಾದಿಯು ಅರಸನಿಗೆ, “ಸಂಹರಿಸಬೇಕೆಂದು ನಾನು ನಿನ್ನ ಕೈಗೆ ಒಪ್ಪಿಸಿದ ಮನುಷ್ಯನನ್ನು ನೀನು ಹೋಗಗೊಟ್ಟಿದ್ದರಿಂದ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವು ಹೋಗುವುದು. ನಿನ್ನ ಪ್ರಜೆಗಳು ಅವನ ಪ್ರಜೆಗಳಾಗುವರು ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂದು ಹೇಳಿದನು.