TSK

TSK · 2 ಪೂರ್ವಕಾಲವೃತ್ತಾ 19:4

Treasury of Scripture Knowledge references in ಕನ್ನಡ IRV.

Back to passage

ಅಬ್ರಹಾಮನು ಬೇರ್ಷೆಬದಲ್ಲಿ ಪಿಚುಲ ವೃಕ್ಷವನ್ನು ನೆಟ್ಟು ಅಲ್ಲಿ ನಿತ್ಯದೇವರಾದ ಯೆಹೋವನ ಹೆಸರನ್ನು ಹೇಳಿಕೊಂಡು ಆರಾಧಿಸಿದನು.

¶ ಆ ಕಾಲದಲ್ಲಿ ಇಸ್ರಾಯೇಲ್ಯರೊಳಗೆ ಅರಸನಿರಲಿಲ್ಲ. ಎಫ್ರಾಯೀಮ್ ಪರ್ವತಪ್ರದೇಶದ ಒಂದು ದೂರ ಸ್ಥಳದಲ್ಲಿ ಒಬ್ಬ ಲೇವಿಯನು ಪ್ರವಾಸಿಯಾಗಿದ್ದನು. ಯೆಹೂದದ ಬೇತ್ಲೆಹೇಮಿನವಳಾದ ಒಬ್ಬ ಸ್ತ್ರೀಯು ಅವನಿಗೆ ಉಪಪತ್ನಿಯಾಗಿದ್ದಳು.

ಆಗ ಸಮುವೇಲನು ಅವರಿಗೆ, “ನೀವು ಪೂರ್ಣಮನಸ್ಸಿನಿಂದ ಯೆಹೋವನ ಕಡೆಗೆ ತಿರುಗಿಕೊಂಡಿರುವುದಾದರೆ ನಿಮ್ಮ ಮಧ್ಯದಲ್ಲಿರುವ ಅಷ್ಟೋರೆತ್ ಮೊದಲಾದ ಅನ್ಯದೇವತೆಗಳನ್ನು ತೆಗೆದುಹಾಕಿ ಯೆಹೋವನ ಮೇಲೆಯೇ ಮನಸ್ಸಿಟ್ಟು ಆತನೊಬ್ಬನನ್ನೇ ಸೇವಿಸಿರಿ. ಆಗ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು” ಅಂದನು.

¶ ಆಸನು ಓದೇದನ ಮಗನಾದ ಅಜರ್ಯ ಪ್ರವಾದಿಯ ಈ ಮಾತುಗಳನ್ನು ಕೇಳಿದಾಗ ಧೈರ್ಯಗೊಂಡನು. ಯೆಹೂದ, ಬೆನ್ಯಾಮೀನ್ ಪ್ರಾಂತ್ಯಗಳಲ್ಲಿಯೂ ತಾನು ಸ್ವಾಧೀನಮಾಡಿಕೊಂಡ ಎಫ್ರಾಯೀಮ್ ಪರ್ವತ ಪ್ರದೇಶದ ಪಟ್ಟಣಗಳಲ್ಲಿಯೂ ಇದ್ದ ಅಸಹ್ಯ ಪ್ರತಿಮೆಗಳನ್ನು ತೆಗೆದು ಹಾಕಿಸಿದನು. ಯೆಹೋವನ ಆಲಯಕ್ಕೆ ಸೇರಿದ ಮಂಟಪದ ಎದುರಿಗಿದ್ದ ಯೆಹೋವನ ಯಜ್ಞವೇದಿಯನ್ನು ಜೀರ್ಣೋದ್ಧಾರ ಮಾಡಿಸಿದನು.

ಈಗ ನಮ್ಮ ಮೇಲಿರುವ ಆತನ ಕೋಪಾಗ್ನಿಯು ತೊಲಗಿ ಹೋಗುವಂತೆ ಇಸ್ರಾಯೇಲಿನ ದೇವರಾದ ಯೆಹೋವನೊಡನೆ ಒಡಂಬಡಿಕೆ ಮಾಡಿಕೊಳ್ಳುವುದಕ್ಕೆ ಮನಸ್ಸುಳ್ಳವನಾಗಿದ್ದೇನೆ.

‹ತಕ್ಷಣವೇ ಐದು ತಲಾಂತು ಹೊಂದಿದವನು ಹೋಗಿ ಅದನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಗಳಿಸಿಕೊಂಡನು.›