TSK

TSK · 2 ಪೂರ್ವಕಾಲವೃತ್ತಾ 24:21

Treasury of Scripture Knowledge references in ಕನ್ನಡ IRV.

Back to passage

ಆ ಮಾತನ್ನು ಹೇಳಿದ ಪ್ರವಾದಿಗೆ ಅರಸನು, “ನಿನ್ನನ್ನು ನನಗೆ ಆಲೋಚನಾಮಂತ್ರಿಯನ್ನಾಗಿ ನೇಮಿಸಿದವರು ಯಾರು?; ಸುಮ್ಮನಿರು, ನಿನಗೆ ಪೆಟ್ಟು ಬೇಕೋ?” ಎಂದನು. ಅವನು, “ನೀನು ನನ್ನ ಬುದ್ಧಿವಾದವನ್ನು ಆಲಿಸದೆ ಹೀಗೆ ಮಾಡುತ್ತಿರುವುದರಿಂದ ದೇವರು ನಿನ್ನನ್ನು ನಾಶ ಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾನೆ ಎಂಬುದನ್ನು ನಾನು ಬಲ್ಲೆ” ಎಂದು ಹೇಳಿ ಸುಮ್ಮನಾದನು.

ಜೀವವನ್ನು ತೆಗೆಯಬೇಕೆಂದು ನೀತಿವಂತರ ಮೇಲೆ ಬೀಳುತ್ತಾರೆ; ನಿರಪರಾಧಿಗಳಿಗೆ ಮರಣಶಿಕ್ಷೆ ವಿಧಿಸುತ್ತಾರೆ.

ಆಗ ಅವರು, “ಯೆರೆಮೀಯನ ವಿರುದ್ಧವಾಗಿ ಒಳಸಂಚು ಮಾಡೋಣ ಬನ್ನಿರಿ; ಧರ್ಮೋಪದೇಶವು ಯಾಜಕನಿಂದ, ಮಂತ್ರಾಲೋಚನೆಯು ಜ್ಞಾನಿಯಿಂದ, ದೈವೋಕ್ತಿಯು ಪ್ರವಾದಿಯಿಂದ ಬಂದ ವಿಷಯ ಎಂದಿಗೂ ತಪ್ಪದು. ಬನ್ನಿರಿ, ಅವನನ್ನು ಬಾಯಿಂದ ಬಡಿಯೋಣ, ಅವನ ಯಾವ ಮಾತಿಗೂ ಕಿವಿಗೊಡದಿರುವ” ಎಂದುಕೊಂಡರು.

ಕಂಡ ದೋಷವನ್ನು ಚಾವಡಿಯಲ್ಲಿ ಖಂಡಿಸುವವನ ಮೇಲೆ ಹಗೆತೋರಿಸುತ್ತೀರಿ, ಯಥಾರ್ಥರನ್ನು ದ್ವೇಷಿಸುತ್ತೀರಿ.

‹ಆದುದರಿಂದ ನೋಡಿರಿ, ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ; ಅವರಲ್ಲಿ ಕೆಲವರನ್ನು ನೀವು ಕೊಲ್ಲುವಿರಿ, ಶಿಲುಬೆಗೆ ಹಾಕುವಿರಿ; ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಚಾಟಿಗಳಿಂದ ಹೊಡೆದು ಊರಿಂದ ಊರಿಗೆ ಅಟ್ಟಿಕೊಂಡು ಹೋಗುವಿರಿ.›