TSK

TSK · 2 ಪೂರ್ವಕಾಲವೃತ್ತಾ 25:27

Treasury of Scripture Knowledge references in ಕನ್ನಡ IRV.

Back to passage

¶ ಅಲ್ಲಿಂದ ಯೆಹೋಶುವನು ಇಸ್ರಾಯೇಲ್ಯರ ಸಹಿತವಾಗಿ ಲಾಕೀಷಿಗೆ ಹೋಗಿ ಮುತ್ತಿಗೆಹಾಕಿ ಯುದ್ಧಮಾಡಿದನು.

ಯೆರೂಸಲೇಮಿನವರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿದ್ದರಿಂದ ಅವನು ಲಾಕೀಷಿಗೆ ಓಡಿಹೋದನು. ಆದರೆ ಅವರು ಅಲ್ಲಿಗೆ ಆಳುಗಳನ್ನು ಕಳುಹಿಸಿ ಅವನನ್ನು ಕೊಲ್ಲಿಸಿದರು.

ಅವನು ಆಸನನ್ನು ಎದುರುಗೊಳ್ಳುವುದಕ್ಕೆ ಹೋಗಿ ಅವನಿಗೆ, “ಆಸನೇ, ಎಲ್ಲಾ ಯೆಹೂದ ಬೆನ್ಯಾಮೀನ ಕುಲಗಳವರೇ, ಕಿವಿಗೊಡಿರಿ, ನೀವು ಯೆಹೋವನನ್ನು ಹೊಂದಿಕೊಂಡಿರುವ ತನಕ ಆತನೂ ನಿಮ್ಮೊಂದಿಗಿರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು; ಆತನನ್ನು ಬಿಟ್ಟರೆ ಆತನೂ ನಿಮ್ಮನ್ನು ಬಿಟ್ಟುಬಿಡುವನು.

ಕಠಿಣವಾಗಿ ಗಾಯಗೊಂಡಿದ್ದ ಅವನನ್ನು ಅರಾಮ್ಯರು ಬಿಟ್ಟು ಹೋದ ಕೂಡಲೆ, ಅವನ ಸೇವಕರು ಅವನು ಯಾಜಕನಾದ ಯೆಹೋಯಾದನ ಮಗನನ್ನು ಕೊಲ್ಲಿಸಿದ ನಿಮಿತ್ತ, ಅವನಿಗೆ ವಿರುದ್ಧವಾಗಿ ಒಳಸಂಚುಮಾಡಿ, ಅವನನ್ನು ಹಾಸಿಗೆಯಲ್ಲೇ ಕೊಂದುಹಾಕಿದರು. ಅವನ ಶವವನ್ನು ದಾವೀದನಗರದೊಳಗೆ ಸಮಾಧಿಮಾಡಿದರು. ಆದರೆ ರಾಜಸ್ಮಶಾನದಲ್ಲಿ ಅವನನ್ನು ಸಮಾಧಿ ಮಾಡಲಿಲ್ಲ.