TSK

TSK · 2 ಪೂರ್ವಕಾಲವೃತ್ತಾ 5:14

Treasury of Scripture Knowledge references in ಕನ್ನಡ IRV.

Back to passage

ಮೇಘವು ದೇವದರ್ಶನದ ಗುಡಾರದ ಮೇಲೆ ನೆಲೆಗೊಂಡಿದ್ದು ಯೆಹೋವನ ತೇಜಸ್ಸು ಪರಿಶುದ್ಧ ನಿವಾಸದ ತುಂಬಾ ಅವರಿಸಿ ಯೆಹೋವನ ಮಹಿಮೆಯು ಗುಡಾರದೊಳಗೆ ತುಂಬಿಕೊಂಡ್ದಿದರಿಂದಲೂ ಮೋಶೆಯು ಗುಡಾರದ ಒಳಗೆ ಪ್ರವೇಶಿಸಲು ಸಾಧ್ಯವಾಗಲಿಲ್ಲ.

¶ ಸೊಲೊಮೋನನು ಪ್ರಾರ್ಥಿಸುವುದನ್ನು ಮುಗಿಸಿದ ಕೂಡಲೆ, ಆಕಾಶದಿಂದ ಬೆಂಕಿಯು ಬಿದ್ದು ಸರ್ವಾಂಗಹೋಮಗಳನ್ನೂ, ಯಜ್ಞಮಾಂಸವನ್ನೂ ದಹಿಸಿ ಬಿಟ್ಟಿತು, ಯೆಹೋವನ ತೇಜಸ್ಸು ಆಲಯದ ತುಂಬಾ ತುಂಬಿಕೊಂಡಿತು.

“ಯೆಹೋವನೇ, ನಮ್ಮ ಪೂರ್ವಿಕರ ದೇವರೇ, ಪರಲೋಕದಲ್ಲಿ ದೇವರಾಗಿ ಇರುವಾತನು ನೀನಲ್ಲವೋ? ನೀನು ಜನಾಂಗಗಳನ್ನೂ, ಎಲ್ಲಾ ರಾಜ್ಯಗಳನ್ನು ಆಳುವವನಾಗಿರುವೆ. ಬಲ, ಪರಾಕ್ರಮಗಳು ನಿನ್ನ ಕೈಗಳಲ್ಲಿ ಇರುತ್ತವೆ: ನಿನ್ನೆದುರಿನಲ್ಲಿ ನಿಲ್ಲುವವರು ಯಾರಿದ್ದಾರೆ?

ಇದಲ್ಲದೆ ಯೆಹೋವನ ತೇಜಸ್ಸು ಕೆರೂಬಿಗಳನ್ನು ಬಿಟ್ಟು ಮೇಲಕ್ಕೇರಿ ದೇವಾಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತು; ದೇವಾಲಯದಲ್ಲಿಯೂ ಮೇಘವು ತುಂಬಿತ್ತು; ಯೆಹೋವನ ತೇಜಸ್ಸಿನ ಅದ್ಭುತಕಾಂತಿಯು ಅಂಗಳದಲ್ಲೆಲ್ಲಾ ವ್ಯಾಪಿಸಿತ್ತು.

ದೇವರ ಮಹಿಮೆಯಿಂದಲೂ, ಆತನ ಶಕ್ತಿಯಿಂದಲೂ ಉಂಟಾದ ಹೊಗೆಯಿಂದ ಆ ಆಲಯ ತುಂಬಿತ್ತು. ಆ ಏಳು ಮಂದಿ ದೇವದೂತರ ಕೈಯಲ್ಲಿದ್ದ ಏಳು ಉಪದ್ರವಗಳು ತೀರುವ ತನಕ ಆ ಆಲಯವನ್ನು ಪ್ರವೇಶಿಸುವುದಕ್ಕೆ ಯಾರಿಂದಲೂ ಸಾಧ್ಯವಾಗಲಿಲ್ಲ.