TSK

TSK · 2 ಪೂರ್ವಕಾಲವೃತ್ತಾ 6:34

Treasury of Scripture Knowledge references in ಕನ್ನಡ IRV.

Back to passage

“ನೀನು ಇಸ್ರಾಯೇಲರಿಗೋಸ್ಕರ ಮಿದ್ಯಾನ್ಯರಿಗೆ ಪ್ರತಿದಂಡನೆಯನ್ನು ಮಾಡಬೇಕು. ಅನಂತರ ನೀನು ಪೂರ್ವಿಕರ ಬಳಿಗೆ ಸೇರಬೇಕು” ಎಂದು ಹೇಳಿದನು.

“ನನ್ನ ಸೇವಕನಾದ ಮೋಶೆ ಸತ್ತನು; ನೀನು ಈಗ ಹೊರಟು ಸಮಸ್ತ ಇಸ್ರಾಯೇಲ್ ಜನರೊಂದಿಗೆ ಈ ಯೊರ್ದನ್ ನದಿಯನ್ನು ದಾಟಿ, ನಾನು ಅವರಿಗೆ ಕೊಡುವ ದೇಶಕ್ಕೆ ಹೋಗು.

¶ ಯೆಹೋಶುವನು ಮರಣಹೊಂದಿದ ನಂತರ ಇಸ್ರಾಯೇಲ್ಯರು “ಕಾನಾನ್ಯರೊಡನೆ ಯುದ್ಧಮಾಡುವುದಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು?” ಎಂದು ಯೆಹೋವನನ್ನು ಕೇಳಲು

ಆತನು ನಿನಗೆ, ‘ಹೊರಟು ಹೋಗಿ ದುಷ್ಟರಾದ ಅಮಾಲೇಕ್ಯರೊಡನೆ ಯುದ್ಧಮಾಡಿ ಅವರೆಲ್ಲರನ್ನೂ ಸಂಪೂರ್ಣವಾಗಿ ನಾಶಮಾಡು’ ಎಂದು ಹೇಳಿದನು.

ನೀನು ನಿನ್ನ ಜನರನ್ನು ಶತ್ರುಗಳೊಡನೆ ಯುದ್ಧಮಾಡುವುದಕ್ಕೋಸ್ಕರ ಎಲ್ಲಿಗಾದರು ಕಳುಹಿಸಿದಾಗ ಅವರು ಅಲ್ಲಿಂದ ನೀನು ಆರಿಸಿಕೊಂಡ ಪಟ್ಟಣದ ಕಡೆಗೂ, ನಾನು ನಿನ್ನ ಹೆಸರಿಗಾಗಿ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು ಯೆಹೋವನಾದ ನಿನ್ನನ್ನು ಪ್ರಾರ್ಥಿಸುವುದಾದರೆ

¶ ಕೂಷ್ಯನಾದ ಜೆರಹನು ಹತ್ತು ಲಕ್ಷ ಸೈನ್ಯವನ್ನೂ ಮುನ್ನೂರು ರಥಗಳನ್ನೂ ತೆಗೆದುಕೊಂಡು ಇಸ್ರಾಯೇಲರಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟು ಮಾರೇಷದವರೆಗೆ ಬಂದನು.

ಆಗ ಯೆಹೂದ್ಯರು ಯೆಹೋವನ ಸಹಾಯವನ್ನು ಕೇಳಿಕೊಳ್ಳುವುದಕ್ಕಾಗಿ ತಮ್ಮ ಎಲ್ಲಾ ಪಟ್ಟಣಗಳಿಂದ ಆತನ ಸನ್ನಿಧಿಯಲ್ಲಿ ಸೇರಿ ಬಂದರು.

¶ ಈ ಕಾರಣದಿಂದ ಅರಸನಾದ ಹಿಜ್ಕೀಯನು ಹಾಗು ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯು ಪರಲೋಕದ ದೇವರಿಗೆ ಮೊರೆಯಿಟ್ಟು ಪ್ರಾರ್ಥಿಸಿದರು.

¶ ಶಾಸನಕ್ಕೆ ರುಜುವಾದದ್ದು ದಾನಿಯೇಲನಿಗೆ ತಿಳಿದಾಗ ಅವನು ತನ್ನ ಮನೆಗೆ ಹೋಗಿ ಯೆರೂಸಲೇಮಿನ ಕಡೆಗೆ ಕದವಿಲ್ಲದೆ ಕಿಟಕಿಗಳುಳ್ಳ ತನ್ನ ಮಹಡಿಯ ಕೋಣೆಯಲ್ಲಿ ವಾಡಿಕೆಯ ಪ್ರಕಾರ ದಿನಕ್ಕೆ ಮೂರಾವರ್ತಿ ಮೊಣಕಾಲೂರಿ ತನ್ನ ದೇವರಿಗೆ ಪ್ರಾರ್ಥನೆಮಾಡಿ ಸ್ತೋತ್ರ ಸಲ್ಲಿಸುತ್ತಿದ್ದನು