TSK

TSK · 2 ಪೂರ್ವಕಾಲವೃತ್ತಾ 6:7

Treasury of Scripture Knowledge references in ಕನ್ನಡ IRV.

Back to passage

“ಯೆಹೋವನ ಅನುಗ್ರಹದಿಂದ ನಮ್ಮ ತಂದೆಯಾದ ದಾವೀದನಿಗೆ ಎಲ್ಲಾ ಶತ್ರುಗಳು ವಶವಾಗುವವರೆಗೆ ಅವನು ತನ್ನ ಸುತ್ತಲೂ ಯುದ್ಧಗಳನ್ನು ನಡೆಸಬೇಕಾಯಿತು. ಆದುದರಿಂದ ಅವನು ತನ್ನ ದೇವರಾದ ಯೆಹೋವನ ಹೆಸರಿಗೆ ಆಲಯವನ್ನು ಕಟ್ಟಿಸಲಾರದೆ ಹೋದನೆಂದು ನೀನು ಬಲ್ಲೇ.

¶ ದಾವೀದನು ತನ್ನ ಅರಮನೆಯಲ್ಲಿ ವಾಸಿಸುತ್ತಿದ್ದಾಗ ಒಂದು ದಿನ ಅವನು ಪ್ರವಾದಿಯಾದ ನಾತಾನನನ್ನು ಬರಲು ಹೇಳಿ, “ನೋಡು, ನಾನು ದೇವದಾರುಮರದ ಅರಮನೆಯಲ್ಲಿ ವಾಸವಾಗಿದ್ದೇನೆ. ಯೆಹೋವನ ಒಡಂಬಡಿಕೆ ಮಂಜೂಷವಾದರೋ ಬಟ್ಟೆಯ ಮನೆಯಲ್ಲಿ ಇರುತ್ತದೆ” ಎಂದು ಹೇಳಿದನು.

ಅವರು ಸೇರಿ ಬಂದಾಗ ಅರಸನಾದ ದಾವೀದನು ಎದ್ದು ನಿಂತು ಅವರಿಗೆ ಹೇಳಿದ್ದೇನೆಂದರೆ, “ನನ್ನ ಸಹೋದರರೇ, ನನ್ನ ಪ್ರಜೆಗಳೇ, ನನ್ನ ಮಾತನ್ನು ಕೇಳಿರಿ, ಯೆಹೋವನ ಒಡಂಬಡಿಕೆಯ ಮಂಜೂಷಕ್ಕೋಸ್ಕರ ನಮ್ಮ ದೇವರ ಪಾದಪೀಠಕ್ಕೋಸ್ಕರ ಆಲಯವನ್ನು ಕಟ್ಟಬೇಕೆಂದು ಮನಸ್ಸು ಮಾಡಿ ಅದಕ್ಕಾಗಿ ಎಲ್ಲವನ್ನೂ ಸಿದ್ಧಪಡಿಸಿದೆನು.