TSK

TSK · 2 ಪೂರ್ವಕಾಲವೃತ್ತಾ 9:22

Treasury of Scripture Knowledge references in ಕನ್ನಡ IRV.

Back to passage

ಅವನ ಜ್ಞಾನವು ಮೂಡಣದೇಶದವರೆಲ್ಲರ ಜ್ಞಾನಕ್ಕಿಂತಲೂ ಐಗುಪ್ತ್ಯರ ಜ್ಞಾನಕ್ಕಿಂತಲೂ ಮಿಗಿಲಾದುದಾಗಿತ್ತು.

ಸೊಲೊಮೋನನಾದರೋ ಪ್ರತಿ ವರ್ಷ ಅವನ ಮನೆಯವರ ಆಹಾರಕ್ಕಾಗಿ ಇಪ್ಪತ್ತು ಸಾವಿರ ಕೋರ್ ಗೋದಿಯನ್ನೂ, ಇಪ್ಪತ್ತು ಕೋರ್ ನಿರ್ಮಲವಾದ ಎಣ್ಣೆಯನ್ನೂ ಕೊಡುತ್ತಿದ್ದನು.

ಇದಲ್ಲದೆ ನಿನಗಿಂತ ಮೊದಲು ಇದ್ದ ಅರಸುಗಳಲ್ಲಿ ಯಾರಿಗೂ ಇಲ್ಲದಂಥ, ನಿನ್ನ ತರುವಾಯ ಯಾರಿಗೂ ಇರದಂಥ ಘನ, ಧನ, ಐಶ್ವರ್ಯಗಳನ್ನೂ ಅನುಗ್ರಹಿಸುವೆನು” ಎಂದನು.

‹ದಕ್ಷಿಣ ದೇಶದ ರಾಣಿಯು ಸೊಲೊಮೋನನ ಜ್ಞಾನವನ್ನು ಕೇಳುವುದಕ್ಕೆ ಭೂಮಿಯ ಕಟ್ಟಕಡೆಯಿಂದ ಬಂದಳು. ಇಗೋ, ಇಲ್ಲಿ ಸೊಲೊಮೋನನಿಗಿಂತ ಹೆಚ್ಚಿನವನಿದ್ದಾನೆ. ದಕ್ಷಿಣ ದೇಶದ ರಾಣಿಯು ನ್ಯಾಯವಿಚಾರಣೆಯಲ್ಲಿ ಈ ಸಂತತಿಯವರೊಂದಿಗೆ ಎದ್ದು ನಿಂತು ಇವರನ್ನು ಖಂಡಿಸುವಳು.›