TSK

TSK · 2 ಅರಸುಗಳು 12:21

Treasury of Scripture Knowledge references in ಕನ್ನಡ IRV.

Back to passage

ಅವನು ಇಸ್ರಾಯೇಲರೊಡನೆ ಫಿಲಿಷ್ಟಿಯರ ವಶದಲ್ಲಿದ್ದ ಗಿಬ್ಬೆತೋನ್ ಎಂಬ ಪಟ್ಟಣಕ್ಕೆ ಮುತ್ತಿಗೆ ಹಾಕಿದಾಗ ಇಸ್ಸಾಕಾರನ ಕುಲದವನೂ, ಅಹೀಯನ ಮಗನೂ ಆದ ಬಾಷನೆಂಬುವವನು ಅವನಿಗೆ ವಿರುದ್ಧವಾಗಿ ಒಳಸಂಚು ಮಾಡಿ ಅವನನ್ನು ಕೊಂದನು.

¶ ಯೆಹೂದ್ಯರ ಅರಸನಾದ ಅಹಜ್ಯನು ಇದನ್ನೆಲ್ಲಾ ಕಂಡು ಬೇತಹಗ್ಗನಿನ ಮಾರ್ಗವಾಗಿ ಓಡಿಹೋದನು. ಯೇಹುವು ಅವನನ್ನು ಹಿಂದಟ್ಟಿ, “ಅವನನ್ನೂ ರಥದಲ್ಲಿಯೇ ಹೊಡೆಯಿರಿ” ಎಂದು ಕೂಗಲು, ಅವನ ಜನರು ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್ ಗಟ್ಟದ ಮೇಲೆ ಅವನನ್ನು ಗಾಯಪಡಿಸಿದರು. ಅಹಜ್ಯನು ಮೆಗಿದ್ದೋವಿಗೆ ಓಡಿಹೋಗಿ ಅಲ್ಲಿ ಸತ್ತನು.

¶ ಇಸ್ರಾಯೇಲರ ಅರಸನಾದ ಯೆಹೋವಾಹಾಜನ ಮಗನಾದ ಯೋವಾಷನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಯೆಹೂದದ ಅರಸನಾದ ಯೆಹೋವಾಷನ ಮಗ ಅಮಚ್ಯ ಎಂಬವನು ಅರಸನಾದನು.

ಯೆರೂಸಲೇಮಿನವರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿದ್ದರಿಂದ ಅವನು ಲಾಕೀಷಿಗೆ ಓಡಿಹೋದನು. ಆದರೆ ಅವರು ಅಲ್ಲಿಗೆ ಆಳುಗಳನ್ನು ಕಳುಹಿಸಿ ಅವನನ್ನು ಕೊಲ್ಲಿಸಿದರು.

ಅಮ್ಮೋನಿಯರ ದೇಶದ ಶಿಮ್ಗಾತೆಂಬಾಕೆಯ ಮಗನಾದ ಜಾಬಾದ್, ಮೋವಾಬ್ ದೇಶದ ಶಿಮ್ರಾತೆಂಬಾಕೆಯ ಮಗನಾದ ಯೆಹೋಜಾಬಾದ್ ಎಂಬುವರೇ ಅವನ ವಿರುದ್ಧವಾಗಿ ಒಳಸಂಚು ಮಾಡಿದವರು.