TSK

TSK · 2 ಅರಸುಗಳು 13:2

Treasury of Scripture Knowledge references in ಕನ್ನಡ IRV.

Back to passage

ಯೆಹೋವನು ಯಾರೊಬ್ಬಾಮನ ಪಾಪಗಳ ನಿಮಿತ್ತವಾಗಿಯೂ ಅವನ ಪ್ರೇರಣೆಯಿಂದ ಇಸ್ರಾಯೇಲರು ಮಾಡಿದ ಅಪರಾಧಗಳ ನಿಮಿತ್ತವಾಗಿಯೂ ಅವರನ್ನು ಶತ್ರುಗಳಿಗೆ ಒಪ್ಪಿಸುವನು” ಎಂದು ಆಕೆಗೆ ಹೇಳಿದನು.

ಆದರೂ ಯೇಹುವು ಇಸ್ರಾಯೇಲರನ್ನು ಬೇತೇಲ್ ಮತ್ತು ದಾನ್ ಊರುಗಳಲ್ಲಿದ್ದ ಚಿನ್ನದ ಬಸವನನ್ನು ಪೂಜಿಸಿ ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಅದನ್ನು ಅನುಸರಿಸಿದನು.

ಎಫ್ರಾಯೀಮು ವ್ಯರ್ಥಾಚಾರಗಳನ್ನು ಅನುಸರಿಸಲು ಮನಸ್ಸುಮಾಡಿದ ಕಾರಣ, ಅದು ದೇವರ ನ್ಯಾಯತೀರ್ಪಿಗೆ ಗುರಿಯಾಗಿ ಹಿಂಸಿಸಲ್ಪಟ್ಟಿದೆ, ಜಜ್ಜಲ್ಪಟ್ಟಿದೆ.