TSK

TSK · 2 ಅರಸುಗಳು 13:21

Treasury of Scripture Knowledge references in ಕನ್ನಡ IRV.

Back to passage

ಮೃತರಾದ ನಿನ್ನ ಜನರು ಬದುಕುವರು, ನಮ್ಮ ಹೆಣಗಳು ಜೀವದಿಂದ ಏಳುವವು, ಧೂಳಿನ ನಿವಾಸಿಗಳೇ, ಎಚ್ಚರಗೊಂಡು ಹರ್ಷಧ್ವನಿಗೈಯಿರಿ! ಯೆಹೋವನೇ, ನೀನು ಸುರಿಸುವ ಇಬ್ಬನಿಯು ಮುಂಜಾನೆಯ ಇಬ್ಬನಿಯಂತಿರುವುದು. ಭೂಮಿಯು ಸತ್ತವರನ್ನು ಹೊರಗೆ ಹಾಕುವುದು.

ಬಂಡೆಗಳು ಸೀಳಿಹೋದವು; ಸಮಾಧಿಗಳು ತೆರೆದವು; ನಿದ್ರೆಹೋಗಿದ್ದ ಅನೇಕ ಭಕ್ತರ ದೇಹಗಳು ಜೀವದಿಂದ ಎದ್ದವು;

‹ಅದಕ್ಕೆ ಆಶ್ಚರ್ಯಪಡಬೇಡಿರಿ. ಒಂದು ಕಾಲ ಬರುತ್ತದೆ, ಆಗ›‹ಸಮಾಧಿಗಳಲ್ಲಿರುವವರೆಲ್ಲಾ ಆತನ ಸ್ವರವನ್ನು ಕೇಳಿ,›

ಹೀಗಿರುವುದರಿಂದ ಜನರು ರೋಗಿಗಳನ್ನು ದೋಲಿಗಳ ಮೇಲೆಯೂ, ಹಾಸಿಗೆಗಳ ಮೇಲೆಯೂ ಇಟ್ಟು ಪೇತ್ರನು ಹಾದು ಹೋಗುವಾಗ, ಅವನ ನೆರಳಾದರೂ ಕೆಲವರ ಮೇಲಾದರೂ ಬೀಳಲಿ ಎಂದು ಅವರನ್ನು ಬೀದಿಗೆ ತೆಗೆದುಕೊಂಡು ಬರುತ್ತಿದ್ದರು.

ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಶ್ವಾಸವು ಬಂದು ಆ ಶವಗಳಲ್ಲಿ ಪ್ರವೇಶಿಸಲು, ಅವರು ಕಾಲೂರಿ ನಿಲ್ಲುವರು. ಅವರನ್ನು ನೋಡಿದವರೆಲ್ಲರೂ ಭಯದಿಂದ ನಡುಗಿದರು.