TSK

TSK · 2 ಅರಸುಗಳು 25:21

Treasury of Scripture Knowledge references in ಕನ್ನಡ IRV.

Back to passage

ಆತನನ್ನು ಕೋಪಗೊಳಿಸಿದರೆ, ನೀವು ಯೊರ್ದನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವ ಆ ದೇಶದಲ್ಲಿ ಉಳಿಯದೆ, ಬೇಗನೆ ನಾಶವಾಗಿ ಹೋಗುವಿರಿ ಎಂದು ಭೂಮ್ಯಾಕಾಶಗಳನ್ನು ಸಾಕ್ಷಿಯಾಗಿಟ್ಟು ಎಚ್ಚರಿಸುತ್ತೇನೆ. ನೀವು ಆ ದೇಶದಲ್ಲಿ ಬಹುದಿನ ಇರದೆ ನಾಶವಾಗಿಯೇ ಹೋಗುವಿರಿ.

ಭೂಮಂಡಲದ ಚತುರ್ದಿಕ್ಕುಗಳಲ್ಲಿರುವ ಎಲ್ಲಾ ಜನಾಂಗಗಳಲ್ಲಿಯೂ ಯೆಹೋವನು ನಿಮ್ಮನ್ನು ಚದರಿಸುವನು. ಅಲ್ಲಿ ನಿಮಗಾಗಲಿ ಅಥವಾ ನಿಮ್ಮ ಪೂರ್ವಿಕರಿಗಾಗಲಿ ಗೊತ್ತಿಲ್ಲದ ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.

¶ “ಅವರು ನಿನಗೆ ವಿರುದ್ಧವಾಗಿ ಪಾಪ ಮಾಡಬಹುದು. ಪಾಪಮಾಡದ ಮನುಷ್ಯನು ಒಬ್ಬನೂ ಇಲ್ಲ. ನೀನು ಅವರ ಮೇಲೆ ಕೋಪಗೊಂಡು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿದಾಗ ಮತ್ತು ಆ ಶತ್ರುಗಳು ಅವರನ್ನು ಸೆರೆಹಿಡಿದು ದೂರದಲ್ಲಾಗಲಿ, ಸಮೀಪದಲ್ಲಾಗಲಿ ಇರುವ ತಮ್ಮ ದೇಶಕ್ಕೆ ಅವರನ್ನು ಒಯ್ದಾಗ,

ಯೆಹೋವನು ತನ್ನ ಸೇವಕರಾದ ಎಲ್ಲಾ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದಂತೆ, ಇಸ್ರಾಯೇಲರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು. ಅವರು ಸೆರೆಯವರಾಗಿ ತಮ್ಮ ದೇಶದಿಂದ ಅಶ್ಶೂರ್ ದೇಶಕ್ಕೆ ಒಯ್ಯಲ್ಪಟ್ಟು ಇಂದಿನವರೆಗೂ ಅಲ್ಲಿಯೇ ಇದ್ದಾರೆ.

ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀನನನ್ನೂ, ಅವನ ತಾಯಿ, ಹೆಂಡತಿ, ಕಂಚುಕಿಗಳನ್ನೂ ಮತ್ತು ದೇಶದ ಪ್ರಧಾನ ಪುರುಷರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆಯಾಗಿ ತೆಗೆದುಕೊಂಡುಹೋದನು.

ಅವರ ಕೇಡಿಗಾಗಿ ನಾನು ಅವರನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಗ್ರಸ್ತರಾಗುವಂತೆ ಮಾಡುವೆನು; ನಾನು ಅವರನ್ನು ಅಟ್ಟಿಬಿಡುವ ಸ್ಥಳಗಳಲ್ಲೆಲ್ಲಾ ಅವರು ನಿಂದೆ, ಕಟ್ಟುಗಾದೆ, ಪರಿಹಾಸ್ಯ, ಶಾಪ, ಇವುಗಳಿಗೆ ಗುರಿಯಾಗುವರು.

ಯೆಹೋವನ ಉಗ್ರದೃಷ್ಟಿಯು ಅವರನ್ನು ಚದುರಿಸಿದೆ; ಆತನು ಇನ್ನು ಅವರ ಮೇಲೆ ಒಲವು ತೋರಿಸುವುದಿಲ್ಲ. ಅವರು ಯಾಜಕರಾದರೇನು, ಅವರಿಗೆ ಮರ್ಯಾದೆ ತಪ್ಪಿದೆ; ವೃದ್ಧರಾದರೇನು, ಯಾರೂ ಅವರನ್ನು ಕರುಣಿಸರು.

¶ ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ, “ಇದು ನಡೆಯುವುದು ನಿಶ್ಚಯ, ನಾನು ನೆರವೇರಿಸುವೆನು; ಹಿಂದೆಗೆಯೆನು, ಕ್ಷಮಿಸೆನು, ಕರುಣಿಸೆನು; ನಿನ್ನ ದುರ್ಮಾರ್ಗ, ದುಷ್ಕೃತ್ಯಗಳಿಗೆ ಸರಿಯಾಗಿ ನಿನಗೆ ನ್ಯಾಯತೀರ್ಪು ಆಗುವುದು” ಇದು ಕರ್ತನಾದ ಯೆಹೋವನ ನುಡಿ.