TSK

TSK · 2 ಸಮುವೇಲನು 2:13

Treasury of Scripture Knowledge references in ಕನ್ನಡ IRV.

Back to passage

¶ ಚೆರೂಯಳ ಮೂರು ಮಂದಿ ಮಕ್ಕಳಾದ ಯೋವಾಬ, ಅಬೀಷೈ, ಅಸಾಹೇಲ ಎಂಬುವರು ಅಲ್ಲಿಗೆ ಬಂದಿದ್ದರು. ಅಸಾಹೇಲನು ಅಡವಿಯ ಜಿಂಕೆಯಂತೆ ಚುರುಕು ಕಾಲಿನವನಾಗಿದ್ದನು.

¶ ಯೋವಾಬನು ಇಸ್ರಾಯೇಲರ ಮುಖ್ಯ ಸೇನಾಧಿಪತಿ. ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳ ಅಧಿಪತಿ.

ಅವನು ಚೆರೂಯಳ ಮಗನಾದ ಯೋವಾಬನನ್ನು ಮತ್ತು ಯಾಜಕನಾದ ಎಬ್ಯಾತಾರನನ್ನೂ ತನ್ನ ಕಡೆಗೆ ಒಲಿಸಿಕೊಂಡನು. ಇವರು ಅವನನ್ನು ಹಿಂಬಾಲಿಸಿ ಅವನಿಗೆ ಸಹಾಯಕರಾದರು.

ಚೆರೂಯ ಮತ್ತು ಅಬೀಗೈಲರು ಅವರ ಸಹೋದರಿಯರು. ಅಬ್ಷೈ, ಯೋವಾಬ ಮತ್ತು ಅಸಾಹೇಲ್ ಎಂಬವರು ಚೆರೂಯಳ ಮಕ್ಕಳು.

ಯೋವಾಬನ ತಮ್ಮನಾದ ಅಸಾಹೇಲನು. ಅವನು ಸತ್ತ ನಂತರ ಅವನ ಮಗನಾದ ಜೆಬದ್ಯನು ನಾಲ್ಕನೆಯ ವರ್ಗದ ನಾಯಕನು. ನಾಲ್ಕನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.