TSK

TSK · 2 ಸಮುವೇಲನು 20:21

Treasury of Scripture Knowledge references in ಕನ್ನಡ IRV.

Back to passage

ಆರೋನನ ಮಗನಾದ ಎಲಿಯಾಜರನು ಮರಣ ಹೊಂದಿದನು. ಅವನ ಶವವನ್ನು ಎಫ್ರಾಯೀಮ್ ಪರ್ವತ ಪ್ರಾಂತ್ಯದಲ್ಲಿ ಅವನ ಮಗನಾದ ಫೀನೆಹಾಸನ ಪಾಲಿಗೆ ಬಂದ ಗುಡ್ಡದಲ್ಲಿ ಸಮಾಧಿಮಾಡಿದರು.

ಇದಲ್ಲದೆ ಗಿದ್ಯೋನನು ಎಫ್ರಾಯೀಮ್ ಪರ್ವತಪ್ರದೇಶಗಳಿಗೆ ದೂತರನ್ನು ಕಳುಹಿಸಿ ಅಲ್ಲಿನವರಿಗೆ, “ನೀವು ಮಿದ್ಯಾನ್ಯರಿಗೆ ವಿರೋಧವಾಗಿ ಹೊರಟು ಬೇತ್‌ಬಾರದವರೆಗಿರುವ ಪ್ರವಾಹಗಳನ್ನೂ ಯೊರ್ದನ್ ಹೊಳೆಯನ್ನೂ ವಶಪಡಿಸಿಕೊಳ್ಳಿರಿ” ಎಂದು ಹೇಳಿಕಳುಹಿಸಿದನು. ಆಗ ಎಫ್ರಾಯೀಮ್ಯರೆಲ್ಲರೂ ಒಟ್ಟಾಗಿ ಬೇತ್‌ಬಾರದವರೆಗಿರುವ ಪ್ರವಾಹಗಳಿಗೂ ಬಂದು ಅವುಗಳ ಹಾಯಗಡಗಳನ್ನೆಲ್ಲಾ ಮತ್ತು ಯೊರ್ದನ್ ಹೊಳೆಯನ್ನೂ ಹಿಡಿದರು.

ಮೀಕನು ತನಗೆ ಇಂಥಿಂಥವುಗಳನ್ನು ಸಂಬಳವಾಗಿ ಕೊಡುತ್ತಾನೆಂದೂ, ತಾನು ಅವನ ಯಾಜಕನಾಗಿದ್ದೇನೆಂದೂ ಹೇಳಿದನು.

ಆದರೆ ದಾವೀದನು, “ಅವನನ್ನು ಕೊಲ್ಲಬೇಡ, ಯೆಹೋವನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತುವ ಯಾವನಾದರೂ ನಿರಪರಾಧಿಯೆಂದು ಪರಿಗಣಿಸಲ್ಪಡುವುದಿಲ್ಲ?” ಅಂದನು.

¶ ಆಕಸ್ಮಾತ್ತಾಗಿ ಬೆನ್ಯಾಮೀನ ಕುಲದವನೂ, ಬಿಕ್ರೀಯ ಮಗನೂ ಆದ ಶೆಬನೆಂಬ ಒಬ್ಬ ದುಷ್ಟಮನುಷ್ಯನು ಅಲ್ಲಿ ಹೇಗೋ ಬಂದಿದ್ದನು. ಅವನು ಕಹಳೆಯನ್ನು ಊದಿ, “ಇಸ್ರಾಯೇಲರೇ, ದಾವೀದನಲ್ಲಿ ನಮಗೆ ಪಾಲಿಲ್ಲ. ಇಷಯನ ಮಗನಲ್ಲಿ ನಮಗೆ ಸ್ವತ್ತು ಇಲ್ಲ. ಪ್ರತಿಯೊಬ್ಬನೂ ನಮ್ಮ ನಮ್ಮ ನಿವಾಸಗಳಿಗೆ ಹೋಗೋಣ” ಎಂದನು.

ಅದಕ್ಕೆ ಗೇಹಜಿಯು, “ಕ್ಷೇಮ, ಎಫ್ರಾಯೀಮ್ ಪರ್ವತ ಪ್ರದೇಶದಿಂದ ಪ್ರವಾದಿಮಂಡಳಿಯವರಾದ ಇಬ್ಬರು ಯೌವನಸ್ಥರು ಬಂದಿರುತ್ತಾರೆ. ಆದುದರಿಂದ ಅವರಿಗೋಸ್ಕರ ಬೇಗನೇ ಒಂದು ತಲಾಂತು ಬೆಳ್ಳಿಯನ್ನೂ, ಎರಡು ಜೋಡಿ ಬಟ್ಟೆಗಳನ್ನೂ ತೆಗೆದುಕೊಂಡು ಬರಬೇಕೆಂದು ನನ್ನ ಯಜಮಾನನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದನು” ಎಂದು ಉತ್ತರ ಕೊಟ್ಟನು.

ಆಹಾ, ದಾನ್ ನಗರದಿಂದ ಪ್ರಕಟಣೆಯ ಧ್ವನಿಯು ಕೇಳಿಬರುತ್ತದೆ, ಎಫ್ರಾಯೀಮಿನ ಬೆಟ್ಟದಲ್ಲಿಯೂ ಕೇಡನ್ನು ಸಾರುತ್ತದೆ.