ಯೆಹೋವನು ಈ ಮಾತುಗಳನ್ನು ಮೋಶೆಗೆ ಹೇಳಿದಂದಿನಿಂದ ಇಸ್ರಾಯೇಲ್ಯರು ಅರಣ್ಯದಲ್ಲಿ ಅಲೆಯುತ್ತಿದ್ದ ವರ್ಷಗಳು ಸೇರಿ ನಲ್ವತ್ತೈದು ವರ್ಷಗಳು ದಾಟಿದವು. ಯೆಹೋವನು ತಾನು ನುಡಿದಂತೆಯೇ ಈ ಕಾಲವೆಲ್ಲಾ ನನ್ನನ್ನು ಜೀವದಿಂದುಳಿಸಿದ್ದಾನೆ. ಈಗ ನಾನು ಎಂಭತ್ತೈದು ವರ್ಷದವನಾಗಿದ್ದೇನೆ.
TSK
TSK · 2 ಸಮುವೇಲನು 21:15
Treasury of Scripture Knowledge references in ಕನ್ನಡ IRV.
ಯೆಹೋಶುವ 14:10
TSK
2 ಸಮುವೇಲನು 5:22
TSK
¶ ಫಿಲಿಷ್ಟಿಯರು ಇನ್ನೊಮ್ಮೆ ಹೊರಟು ಬಂದು ರೆಫಾಯೀಮ್ ತಗ್ಗಿನಲ್ಲಿ ಇಳಿದುಕೊಂಡರು.
2 ಸಮುವೇಲನು 8:1
TSK
¶ ಅನಂತರ ದಾವೀದನು ಹೋಗಿ ಫಿಲಿಷ್ಟಿಯರ ಮೇಲೆ ಮುತ್ತಿಗೆ ಹಾಕಿ, ಅವರನ್ನು ಸೋಲಿಸಿ, ಅವರ ರಾಜಧಾನಿಯನ್ನು ವಶಪಡಿಸಿಕೊಂಡು, ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು.
ಕೀರ್ತನೆಗಳು 71:9
TSK
ವೃದ್ಧಾಪ್ಯದಲ್ಲಿ ನನ್ನನ್ನು ಧಿಕ್ಕರಿಸಬೇಡ; ನನ್ನ ಬಲವು ಕುಂದಿದಾಗ ಕೈಬಿಡಬೇಡ.
ಕೀರ್ತನೆಗಳು 73:26
TSK
ತನುಮನಗಳು ಕ್ಷಯಿಸಿದರೂ ನನ್ನ ಆತ್ಮಕ್ಕೆ ಬಲವು ನನ್ನ ಶಾಶ್ವತವಾದ ಪಾಲೂ ದೇವರೇ.
ಯೆಶಾಯ 40:28
TSK
ನೀನು ಗ್ರಹಿಸಲಿಲ್ಲವೋ? ಕೇಳಲಿಲ್ಲವೋ? ಯೆಹೋವನು ನಿರಂತರ ದೇವರೂ, ಭೂಮಿಯ ಕಟ್ಟಕಡೆಗಳನ್ನು ನಿರ್ಮಿಸಿದವನೂ ಆಗಿದ್ದಾನೆ. ಆತನು ದಣಿದು ಬಳಲುವುದಿಲ್ಲ, ಆತನ ವಿವೇಕವು ಪರಿಶೋಧನೆಗೆ ಅಗಮ್ಯ.
1 ಪೇತ್ರನು 1:24
TSK
ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ: “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಅದರ ಮಹಿಮೆಯೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವುದು. ಅದರ ಹೂವು ಉದುರಿ ಹೋಗುವುದು.