TSK

TSK · 2 ಸಮುವೇಲನು 22:21

Treasury of Scripture Knowledge references in ಕನ್ನಡ IRV.

Back to passage

ಆದ್ದರಿಂದ ನನ್ನ ನೀತಿಗೆ ತಕ್ಕಂತೆಯೂ, ಆತನ ದೃಷ್ಟಿಯಲ್ಲಿ ನನ್ನ ನಿರಪರಾಧಕ್ಕೆ ತಕ್ಕಂತೆಯೂ ಯೆಹೋವನು ನನಗೆ ತಕ್ಕ ಪ್ರತಿಫಲವನ್ನು ಕೊಟ್ಟನು.

ಪರಲೋಕದಲ್ಲಿರುವ ನೀನು ಅದನ್ನು ಕೇಳಿ ನಿನ್ನ ಸೇವಕರ ವ್ಯಾಜ್ಯವನ್ನು ತೀರಿಸು. ದುಷ್ಟನಿಗೆ ಅವನ ದುಷ್ಟತ್ವವನ್ನು ಅವನ ತಲೆಯ ಮೇಲೆಯೇ ಬರಮಾಡಿ, ಅವನು ಅಪರಾಧಿಯೆಂದು ತೋರಿಸು. ನೀತಿವಂತನಿಗೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದೂ ತೋರಿಸಿಕೊಡು.

ಯೆಹೋವನೇ, ನನ್ನ ದೇವರೇ, ನಾನು ಕೈಗಳಲ್ಲಿ ಅನ್ಯಾಯವುಳ್ಳವನೂ,

ಯೆಹೋವನು ನನ್ನ ನೀತಿಗೆ ಸರಿಯಾಗಿ ಮೇಲನ್ನು ಮಾಡಿದನು, ನನ್ನ ಕೈಗಳ ಶುದ್ಧತ್ವಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಟ್ಟನು.

ಯಾರು ಅಯೋಗ್ಯಕಾರ್ಯಗಳಲ್ಲಿ ಮನಸ್ಸಿಡದೆ, ಮೋಸ ಪ್ರಮಾಣಮಾಡದೆ, ಶುದ್ಧಹಸ್ತವೂ, ನಿರ್ಮಲಮನಸ್ಸೂ ಉಳ್ಳವನಾಗಿದ್ದಾನೋ,

ದೇವರ ಸಮೀಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸಮೀಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲಮಾಡಿಕೊಳ್ಳಿರಿ.