TSK

TSK · 2 ಸಮುವೇಲನು 3:8

Treasury of Scripture Knowledge references in ಕನ್ನಡ IRV.

Back to passage

ಆಗ ಸಮುವೇಲನು ಅವನಿಗೆ, “ಯೆಹೋವನು ಈ ಹೊತ್ತು ಇಸ್ರಾಯೇಲಿನ ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನಗಿಂತ ಉತ್ತಮನಾದ ಇನ್ನೊಬ್ಬನಿಗೆ ಕೊಟ್ಟಿದ್ದಾನೆ.

ಇಸ್ರಾಯೇಲರ ಅರಸನೇ ಯಾರನ್ನು ಹಿಂಬಾಲಿಸಿ ಹೊರಟಿರುವೇ? ಯಾರನ್ನು ಹಿಡಿಯಬೇಕೆಂದಿರುತ್ತೀ? ಸತ್ತ ನಾಯಿಯನ್ನೋ? ಒಂದು ಬಡ ನೊಣವನ್ನೋ?.

ಯೆಹೋವನು ದಾವೀದನ ವಿಷಯವಾಗಿ ನನ್ನ ಸೇವಕನಾದ ದಾವೀದನ ಮುಖಾಂತರವಾಗಿ ನನ್ನ ಪ್ರಜೆಗಳಾದ ಇಸ್ರಾಯೇಲ್ಯರನ್ನು ಫಿಲಿಷ್ಟಿಯರ ಕೈಗೂ ಬೇರೆ ಎಲ್ಲಾ ಶತ್ರುಗಳ ಕೈಗೂ ತಪ್ಪಿಸುವನೆಂದು ನುಡಿದಿದ್ದಾನಲ್ಲಾ” ಎಂದು ಹೇಳಿದನು.

ಮೆಫೀಬೋಶೆತನು ಇದನ್ನು ಕೇಳಿ ಅರಸನಿಗೆ ಸಾಷ್ಟಾಂಗನಮಸ್ಕಾರಮಾಡಿ, “ಸತ್ತ ನಾಯಿಯಂತಿರುವ ನನ್ನನ್ನು ನೀನು ಕಟಾಕ್ಷಿಸಲು ನಿನ್ನ ದಾಸನಾದ ನಾನು ಎಷ್ಟರವನು?” ಎಂದು ಹೇಳಿದನು.

¶ ಹಜಾಯೇಲನು ಎಲೀಷನಿಗೆ, “ನಿನ್ನ ಸೇವಕನಾದ ನಾನು ನಾಯಿಯಂತಿರುತ್ತೇನಷ್ಟೇ; ನನ್ನಿಂದ ಇಂಥಾ ಕ್ರೂರ ಕಾರ್ಯವಾಗುವುದು ಹೇಗೆ?” ಎಂದು ಕೇಳಲು ಅವನು, “ನೀನು ಅರಾಮ್ಯರ ಅರಸನಾಗುವಿಯೆಂದು ಯೆಹೋವನು ನನಗೆ ತಿಳಿಸಿದ್ದಾನೆ” ಎಂದನು.

ಮನುಷ್ಯರ ಮೇಲಿನ ಕೋಪವೂ ನಿನ್ನ ಘನತೆಗೆ ಸಾಧನವಾಗುವುದು; ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ.

ಇದರ ನಿಮಿತ್ತ ಯೋಹಾನನು ಹೆರೋದನಿಗೆ, “ನಿನ್ನ ಅಣ್ಣನ ಹೆಂಡತಿಯು ಆತನು ಬದುಕಿರುವಾಗಲೇ ನಿನ್ನವಳ್ಳಾಗಿರುವುದು ಅಧರ್ಮವಲ್ಲವೇ” ಎಂದು ಹೇಳುತ್ತಿದ್ದನು.