TSK

TSK · 2 ಸಮುವೇಲನು 4:9

Treasury of Scripture Knowledge references in ಕನ್ನಡ IRV.

Back to passage

ನಾನು ಈ ಹೊತ್ತು ನಿನ್ನ ಜೀವವನ್ನು ಮಾನ್ಯವಾದದ್ದೆಂದು ಎಣಿಸಿದಂತೆ ಯೆಹೋವನು ನನ್ನ ಜೀವವನ್ನು ಮಾನ್ಯವಾದದ್ದೆಂದು ಎಣಿಸಿ, ಎಲ್ಲಾ ಇಕ್ಕಟ್ಟಿನಿಂದ ಬಿಡಿಸಲಿ” ಎಂದನು.

ನೀನೇ ನನಗೆ ಆಧಾರವಲ್ಲವೇ; ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟಿದ್ದೇನೆ. ಯೆಹೋವನೇ, ನಂಬಿಗಸ್ತನಾದ ದೇವರೇ, ನನ್ನನ್ನು ವಿಮೋಚಿಸಿದ್ದೀ.

ಯೆಹೋವನು ನೀತಿವಂತರ ಕೂಗನ್ನು ಕೇಳಿ, ಎಲ್ಲಾ ಕಷ್ಟಗಳಿಂದ ಅವರನ್ನು ಬಿಡಿಸುತ್ತಾನೆ.

ನನ್ನ ತುಟಿಗಳೂ ಮತ್ತು ನೀನು ರಕ್ಷಿಸಿದ ನನ್ನ ಪ್ರಾಣವೂ ನಿನ್ನನ್ನು ಹಾಡಿಹರಸುವವು.

ಹಗೆಗಳ ಕೈಯಿಂದ ಅವರನ್ನು ತಪ್ಪಿಸಿದನು; ವೈರಿಯ ಹಸ್ತದಿಂದ ಬಿಡಿಸಿದನು.

ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ, ಅನ್ಯ ಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು. ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.