TSK

TSK · 2 ತಿಮೊಥೆಯನಿಗೆ 1:3

Treasury of Scripture Knowledge references in ಕನ್ನಡ IRV.

Back to passage

¶ “ನಾನು ಯೆಹೂದ್ಯನು, ಕಿಲಿಕ್ಯದ ತಾರ್ಸದಲ್ಲಿ ಹುಟ್ಟಿದವನು, ಆದರೆ ಈ ಪಟ್ಟಣದಲ್ಲೇ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ, ನಮ್ಮ ಪೂರ್ವಿಕರ ಧರ್ಮಶಾಸ್ತ್ರದಲ್ಲಿ ಪೂರ್ಣ ಶಿಕ್ಷಣವನ್ನು ಪಡೆದವನು; ನೀವೆಲ್ಲರೂ ಈಹೊತ್ತು ದೇವರ ವಿಷಯದಲ್ಲಿ ಅಭಿಮಾನಿಗಳಾಗಿರುವಂತೆಯೇ, ನಾನೂ ಅಭಿಮಾನಿಯಾಗಿದ್ದೆನು.

ಒಂದನ್ನು ಮಾತ್ರ ನಿನ್ನ ಮುಂದೆ ಒಪ್ಪಿಕೊಳ್ಳುತ್ತೇನೆ, ಅದೇನೆಂದರೆ; ಇವರು ನನ್ನನ್ನು ಧರ್ಮವಿರೋಧಿ ಎಂದೂ ಹೇಳುವ, ಮಾರ್ಗಕ್ಕನುಸಾರವಾಗಿ ನಾನು ನಮ್ಮ ಪೂರ್ವಿಕರ ದೇವರನ್ನು ಆರಾಧಿಸುವವನಾಗಿದ್ದೇನೆ. ಧರ್ಮಶಾಸ್ತ್ರಕ್ಕನುಗುಣವಾಗಿರುವ ಮತ್ತು ಪ್ರವಾದಿಗಳ ಗ್ರಂಥಗಳಲ್ಲಿ ಬರೆದಿರುವ ಎಲ್ಲಾ ವಿಷಯಗಳನ್ನು ನಂಬುತ್ತೇನೆ.

¶ “ನಾನು ಚಿಕ್ಕಂದಿನಿಂದಲೂ, ಯೆರೂಸಲೇಮಿನಲ್ಲಿ ನನ್ನ ದೇಶದ ಜನರೊಳಗಿದ್ದು, ಬದುಕಿದ ರೀತಿಯು ಎಲ್ಲಾ ಯೆಹೂದ್ಯರಿಗೆ ತಿಳಿದ ವಿಷಯವಾಗಿದೆ.

¶ ಮೊದಲು ನಿಮ್ಮ ನಂಬಿಕೆಯು ಲೋಕದಲ್ಲೆಲ್ಲಾ ಪ್ರಸಿದ್ಧಿಗೆ ಬಂದದ್ದರಿಂದ ನಿಮ್ಮೆಲ್ಲರ ವಿಷಯವಾಗಿ ಯೇಸು ಕ್ರಿಸ್ತನ ಮೂಲಕ ನನ್ನ ದೇವರಿಗೆ ಸ್ತೋತ್ರ ಮಾಡುತ್ತೇನೆ.

ನಾವು ಕೇವಲ ಮನುಷ್ಯಜ್ಞಾನವನ್ನು ಬಳಸದೇ ದೇವರ ಕೃಪೆಯನ್ನು ಆಶ್ರಯಿಸಿ ಪರಿಶುದ್ಧರಾಗಿಯೂ, ಪ್ರಾಮಾಣಿಕರಾಗಿಯೂ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡೆದುಕೊಂಡೆವೆಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಇದೇ ನಮಗಿರುವ ಹೆಮ್ಮೆ.

ನಾನು ನಿಮಗೋಸ್ಕರ ನನ್ನ ಪ್ರಾರ್ಥನೆಗಳಲ್ಲಿ ವಿಜ್ಞಾಪನೆ ಮಾಡುವಾಗ ದೇವರಿಗೆ ಎಡೆಬಿಡದೆ ಸ್ತೋತ್ರ ಮಾಡುತ್ತೇನೆ.

ನಿಮ್ಮ ಮುಖವನ್ನು ನೋಡುವುದಕ್ಕೂ ನಿಮ್ಮ ನಂಬಿಕೆಯ ಕೊರತೆಗಳನ್ನು ನೀಗುವುದಕ್ಕೂ ನಾವು ಹಗಲಿರುಳು ದೇವರನ್ನು ತುಂಬಾ ಕಳಕಳಿಯಿಂದ ಬೇಡುವವರಾಗಿದ್ದೇವೆ.

ನಂಬಿಕೆಯನ್ನೂ ಒಳ್ಳೆಯ ಮನಸ್ಸಾಕ್ಷಿಯನ್ನೂ ಗಟ್ಟಿಯಾಗಿ ಹಿಡಿದುಕೊಂಡಿರು. ಕೆಲವರು ಒಳ್ಳೆಯ ಮನಸ್ಸಾಕ್ಷಿಯನ್ನು ತಳ್ಳಿಬಿಟ್ಟು ನಂಬಿಕೆಯ ವಿಷಯದಲ್ಲಿ ಹಡಗು ಒಡೆದು, ನಷ್ಟಪಟ್ಟವರಂತೆ ಇದ್ದಾರೆ.

ಚಿಕ್ಕಂದಿನಿಂದಲೂ ನಿನಗೆ ಪರಿಶುದ್ಧ ಗ್ರಂಥಗಳ ಪರಿಚಯವಾಗಿದೆಯಲ್ಲಾ. ಆ ಗ್ರಂಥಗಳು ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆಹೊಂದುವ ಜ್ಞಾನವನ್ನು ನಿನಗೆ ಕೊಡುವುದಕ್ಕೆ ಶಕ್ತವಾಗಿವೆ.