TSK

TSK · ಅಪೊಸ್ತಲರ ಕೃತ್ಯಗ 10:14

Treasury of Scripture Knowledge references in ಕನ್ನಡ IRV.

Back to passage

ನಿಮ್ಮಲ್ಲಿ ಗಂಡಸರು ಮಾತ್ರ ಹೋಗಿ ಯೆಹೋವನನ್ನು ಆರಾಧಿಸಿ ಬರಬಹುದು. ನೀವು ಕೇಳಿಕೊಂಡದ್ದು ಅಷ್ಟೇ ಅಲ್ಲವೇ” ಎಂದು ಹೇಳಿ ಅವರನ್ನು ಫರೋಹನು ತನ್ನ ಸನ್ನಿಧಿಯಿಂದ ಹೊರಡಿಸಿಬಿಟ್ಟನು.

¶ “‘ನೀವು ಶುದ್ಧ ಮತ್ತು ಅಶುದ್ಧ ಪಶುಗಳನ್ನು ಹಾಗು ಪಕ್ಷಿಗಳನ್ನು ಪ್ರತ್ಯೇಕಿಸುವ ವಿವೇಚನೆ ಹೊಂದಿರಬೇಕು. ನಾನು ಅಶುದ್ಧವೆಂದು ನಿರ್ಣಯಿಸಿರುವ ಯಾವ ಪಶು, ಪಕ್ಷಿ ಹಾಗು ಕ್ರಿಮಿಕೀಟಗಳಿಂದಲೂ ನಿಮ್ಮನ್ನು ಅಸಹ್ಯಮಾಡಿಕೊಳ್ಳಬಾರದು.

ಯಾಜಕರು ತಾನಾಗಿ ಸತ್ತು ಬಿದ್ದ ಅಥವಾ ಕಾಡುಮೃಗದಿಂದ ಕೊಲ್ಲಲ್ಪಟ್ಟ ಪಕ್ಷಿಯನ್ನಾಗಲಿ ಅಥವಾ ಪಶುವನ್ನಾಗಲಿ ತಿನ್ನಬಾರದು.”

ಆಗ ಪೇತ್ರನು ಆತನನ್ನು ಪಕ್ಕಕ್ಕೆ ಕರೆದುಕೊಂಡು ಹೋಗಿ, “ಕರ್ತನೇ, ದೇವರು ಅದನ್ನು ನಿನಗೆ ಬರಗೊಡಿಸದಿರಲಿ; ನಿನಗೆ ಹೀಗೆ ಎಂದಿಗೂ ಆಗಬಾರದು” ಎಂದು ಆತನನ್ನು ಗದರಿಸುವುದಕ್ಕೆ ಪ್ರಾರಂಭಿಸಿದನು.

ಈ ವಿಷಯದಲ್ಲಿ ಎಲಿಸಬೇತಳು “ಅದು ಬೇಡ, ಯೋಹಾನನೆಂದು ಹೆಸರಿಡಬೇಕು” ಅನ್ನಲು,

ಅಲ್ಲಿ ಬಹು ಜನರು ಸೇರಿ ಬಂದಿರುವುದನ್ನು ಕಂಡು ಅವರಿಗೆ; “ಯೆಹೂದ್ಯರು, ಅನ್ಯ ಜನರೊಂದಿಗೆ ಸಂಪರ್ಕ ಇಟ್ಟುಕೊಳ್ಳುವುದು, ಅವರೊಂದಿಗೆ ವ್ಯವಹರಿಸುವುದು ಯೆಹೂದ್ಯರ ಸಂಪ್ರದಾಯಕ್ಕೆ ನಿಷಿದ್ಧವಾಗಿದೆ ಎಂಬುದು ನಿಮಗೆ ತಿಳಿದಿದೆ. ನನಗಂತೂ ಯಾವ ಮನುಷ್ಯನನ್ನೂ ಹೊಲೆಯಾದವನು, ಇಲ್ಲವೆ ಅಶುದ್ಧನು ಎಂದು ಅನ್ನಬಾರದೆಂದು ದೇವರು ತೋರಿಸಿಕೊಟ್ಟಿದ್ದಾನೆ.