TSK

TSK · ಅಪೊಸ್ತಲರ ಕೃತ್ಯಗ 10:41

Treasury of Scripture Knowledge references in ಕನ್ನಡ IRV.

Back to passage

ಆತನು ಅವರ ಸಂಗಡ ಊಟಕ್ಕೆ ಕುಳಿತುಕೊಂಡಾಗ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ, ಮುರಿದು ಅವರಿಗೆ ಕೊಡುತ್ತಿರಲಾಗಿ,

‹ಆ ಸಹಾಯಕನು ಯಾರೆಂದರೆ›‹ಸತ್ಯದ ಆತ್ಮನೇ. ಲೋಕವು ಆತನನ್ನು ನೋಡದೆಯೂ, ತಿಳಿಯದೆಯೂ ಇರುವುದರಿಂದ ಆತನನ್ನು ಸ್ವೀಕರಿಸಲಾರದು. ನೀವು ಆತನನ್ನು ಬಲ್ಲಿರಿ, ಹೇಗೆಂದರೆ ಆತನು ನಿಮ್ಮೊಂದಿಗೆ ವಾಸಮಾಡುತ್ತಾನೆ ಮತ್ತು ನಿಮ್ಮೊಳಗೆ ಇರುವನು.›

‹ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿದ್ದೇನೆ, ನೀವು ಹೊರಟು ಹೋಗಿ ಫಲಕೊಡಬೇಕೆಂತಲೂ, ಹಾಗೂ ನೀವು ಕೊಡುವ ಫಲವು ಸದಾಕಾಲ ನಿಲ್ಲುವಂಥದ್ದಾಗಬೇಕಂತಲೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ, ಅದನ್ನು ಆತನು ನಿಮಗೆ ಕೊಡುವನು.›

ಯೇಸು ಬಂದು ರೊಟ್ಟಿಯನ್ನು ತೆಗೆದುಕೊಂಡು ಅವರಿಗೆ ಕೊಟ್ಟನು. ಹಾಗೆಯೇ ಮೀನನ್ನೂ ಕೊಟ್ಟನು.

ಮತ್ತು ಆತನು ಗಲಿಲಾಯದಿಂದ ಯೆರೂಸಲೇಮಿಗೆ ತನ್ನ ಜೊತೆಯಲ್ಲಿ ಬಂದವರಿಗೆ ಅನೇಕ ದಿನಗಳವರೆಗೂ ಕಾಣಿಸಿಕೊಂಡನು; ಈಗ ಅವರು ಜನರಿಗೆ ಆತನ ಸಾಕ್ಷಿಗಳಾಗಿದ್ದಾರೆ.