TSK

TSK · ಅಪೊಸ್ತಲರ ಕೃತ್ಯಗ 10:5

Treasury of Scripture Knowledge references in ಕನ್ನಡ IRV.

Back to passage

ಅವನನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದನು. ಯೇಸು ಅವನನ್ನು ನೋಡಿ ‹“ನೀನು ಯೋಹಾನನ ಮಗನಾದ ಸೀಮೋನನು. ಇನ್ನು ಮೇಲೆ ನೀನು ‘ಕೇಫ’ ಎಂದು ಕರೆಯಲ್ಪಡುವಿ”› ಎಂದು ಹೇಳಿದನು. (ಕೇಫ ಎಂದರೆ ಪೇತ್ರ ಇಲ್ಲವೆ ಬಂಡೆ ಎಂದು ಅರ್ಥ)

ಯೊಪ್ಪಕ್ಕೆ ಲುದ್ದವು ಹತ್ತಿರವಾಗಿರಲಾಗಿ ಪೇತ್ರನು ಅಲ್ಲಿ ಇದ್ದಾನೆಂದು ಶಿಷ್ಯರು ಕೇಳಿ ಇಬ್ಬರು ಮನುಷ್ಯರನ್ನು ಅವನ ಬಳಿಗೆ ಕಳುಹಿಸಿ, “ತಡಮಾಡದೆ ನಮ್ಮ ಹತ್ತಿರಕ್ಕೆ ಬರಬೇಕೆಂದು” ಬೇಡಿಕೊಂಡರು.

ನೀನು ಯಾರನ್ನಾದರು ಯೊಪ್ಪಕ್ಕೆ ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು, ಅವನು ಚಮ್ಮಾರನಾದ ಸೀಮೋನನ ಮನೆಯಲ್ಲಿ ಇಳುಕೊಂಡಿದ್ದಾನೆ; ಆ ಮನೆ ಸಮುದ್ರ ತೀರದ ಸಮೀಪವಿದೆ’ ಅಂದನು.

ಆ ರಾತ್ರಿ ಪೌಲನಿಗೆ ಒಂದು ದರ್ಶನವಾಯಿತು, ಏನೆಂದರೆ, ಮಕೆದೋನ್ಯ ದೇಶದವನಾದ ಒಬ್ಬ ಮನುಷ್ಯನು ನಿಂತುಕೊಂಡು; “ನೀನು ಸಮುದ್ರವನ್ನು ದಾಟಿ ಮಕೆದೋನ್ಯಕ್ಕೆ ಬಂದು ನಮಗೆ ನೆರವಾಗಬೇಕೆಂದು” ಅವನನ್ನು ಬೇಡಿಕೊಳ್ಳುತ್ತಿದ್ದನು.