TSK

TSK · ಅಪೊಸ್ತಲರ ಕೃತ್ಯಗ 11:28

Treasury of Scripture Knowledge references in ಕನ್ನಡ IRV.

Back to passage

ಫರೋಹನು ತನ್ನ ಸೇವಕರಿಗೆ, “ಇವನಲ್ಲಿ ದೇವರ ಆತ್ಮ ಉಂಟಲ್ಲಾ. ಇಂಥ ಯೋಗ್ಯನಾದ ಪುರುಷನು ನಮಗೆ ಸಿಕ್ಕಾನೋ?” ಎಂದನು.

¶ ಎಲೀಷನು ತಾನು ಬದುಕಿಸಿದ ಹುಡುಗನ ತಾಯಿಗೆ, “ಯೆಹೋವನು ಈ ದೇಶಕ್ಕೆ ಏಳು ವರ್ಷಗಳ ಕಾಲ ಕ್ಷಾಮವನ್ನು ಬರಮಾಡುವುದಕ್ಕಿದ್ದಾನೆ. ಆದುದರಿಂದ ನೀನು ನಿನ್ನ ಮನೆಯವರೊಡನೆ ಯಾವುದಾದರೊಂದು ಪರದೇಶಕ್ಕೆ ಹೋಗಿ ಅಲ್ಲಿ ವಾಸಿಸು” ಎಂದು ಹೇಳಿದನು.

¶ ಆ ಕಾಲದಲ್ಲಿ ತನ್ನ ರಾಜ್ಯದ ಜನರೆಲ್ಲಾ ಜನಗಣತಿಯನ್ನು ಮಾಡಿಸಿಕೊಳ್ಳಬೇಕೆಂಬ ಆಜ್ಞೆಯು ಚಕ್ರವರ್ತಿಯಾದ ಔಗುಸ್ತನಿಂದ ಹೊರಟಿತು.

ಪೊಂತದಲ್ಲಿ ಹುಟ್ಟಿದ ಅಕ್ವಿಲನೆಂಬ ಒಬ್ಬ ಯೆಹೂದ್ಯನನ್ನು ಅಲ್ಲಿ ಕಂಡನು. ಯೆಹೂದ್ಯರೆಲ್ಲರೂ ರೋಮಾಪುರವನ್ನು ಬಿಟ್ಟುಹೋಗಬೇಕೆಂದು ಕ್ಲೌದಿಯ ಚಕ್ರವರ್ತಿಯು ಆಜ್ಞೆ ವಿಧಿಸಿದ ಕಾರಣ ಅಕ್ವಿಲನೂ ಅವನ ಹೆಂಡತಿಯಾದ ಪ್ರಿಸ್ಕಿಲ್ಲಳೂ ಕೆಲವು ದಿನಗಳ ಮೊದಲೇ ಇತಾಲ್ಯ ದೇಶದಿಂದ ಅಲ್ಲಿಗೆ ಬಂದಿದ್ದರು.