ಅವನ ಮೇಲೆ ತನ್ನ ಕೈಗಳನ್ನಿಟ್ಟು ಯೆಹೋವನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನಿಗೆ ಅಧಿಕಾರವನ್ನು ಕೊಟ್ಟನು.
TSK
TSK · ಅಪೊಸ್ತಲರ ಕೃತ್ಯಗ 13:3
Treasury of Scripture Knowledge references in ಕನ್ನಡ IRV.
ಇವರು ಅಲ್ಲಿಗೆ ಬಂದು ಆ ಜನರಿಗೆ ಪವಿತ್ರಾತ್ಮವರವು ದೊರೆಯಬೇಕೆಂದು ಅವರಿಗೋಸ್ಕರ ಪ್ರಾರ್ಥನೆಮಾಡಿದರು.
ಇವರು ಕರ್ತನನ್ನು ಆರಾಧಿಸುತ್ತಾ, ಉಪವಾಸಮಾಡುತ್ತಾ ಇದ್ದಾಗ ಪವಿತ್ರಾತ್ಮನು; “ನಾನು ಬಾರ್ನಬ ಮತ್ತು ಸೌಲರನ್ನು ಕರೆದ ಸೇವೆಗಾಗಿ ಅವರನ್ನು ಬೇರ್ಪಡಿಸಿರಿ” ಎಂದು ಹೇಳಿದನು.
ಅವರು ಈವರೆಗೆ ನೆರವೇರಿಸಿ ಬಂದಿರುವ ಕೆಲಸಕ್ಕೋಸ್ಕರ ತಮ್ಮನ್ನೇ ದೇವರ ಕೃಪಾಶ್ರಯಕ್ಕೆ ಮೊದಲು ಒಪ್ಪಿಸಿಕೊಟ್ಟದ್ದು ಈ ಊರಿನಲ್ಲಿಯೇ.
ಇದಕ್ಕೆ ಸರಿಯಾಗಿ “ಶುಭದ ಸುವಾರ್ತೆಯನ್ನು ಸಾರುವವರ ಪಾದಗಳು ಎಷ್ಟೋ ಮನೋಹರವಾಗಿವೆ” ಎಂದು ಬರೆದಿದೆ.
ಅವಸರದಿಂದ ಯಾರ ತಲೆಯ ಮೇಲೆಯಾದರೂ ಹಸ್ತವನ್ನಿಟ್ಟು ಸಭೆಯ ನಾಯಕತ್ವಕ್ಕೆ ನೇಮಿಸಬೇಡ. ಮತ್ತೊಬ್ಬರು ಮಾಡಿದ ಪಾಪದಲ್ಲಿ ನೀನು ಪಾಲುಗಾರನಾಗದೆ, ನೀನು ಶುದ್ಧನಾಗಿರುವ ಹಾಗೆ ನೋಡಿಕೋ.
ನೀನು ಅನೇಕ ಸಾಕ್ಷಿಗಳ ಮುಂದೆ ನನ್ನಿಂದ ಕೇಳಿದ ಉಪದೇಶವನ್ನು ಇತರರಿಗೆ ಬೋಧಿಸಲು ಶಕ್ತರಾದ, ನಂಬಿಗಸ್ತರಾದ ಜನರಿಗೆ ಅದನ್ನು ಒಪ್ಪಿಸಿಕೊಡು.
ಆದುದರಿಂದ, ನಾವು ಸತ್ಯಕ್ಕೆ ಸಹಕಾರಿಗಳಾಗುವಂತೆ, ಅಂಥವರನ್ನು ಸೇರಿಸಿಕೊಳ್ಳುವ ಹಂಗಿನಲ್ಲಿದ್ದೇವೆ.