TSK

TSK · ಅಪೊಸ್ತಲರ ಕೃತ್ಯಗ 13:8

Treasury of Scripture Knowledge references in ಕನ್ನಡ IRV.

Back to passage

¶ ಆಗ ಕೆನಾನನ ಮಗನಾದ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಹೋಗಿ ಅವನ ಕೆನ್ನೆಗೆ ಒಂದು ಏಟು ಹಾಕಿ, “ಯೆಹೋವನ ಆತ್ಮವು ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತನಾಡುವುದಕ್ಕೋಸ್ಕರ ಯಾವ ಮಾರ್ಗವಾಗಿ ಬಂದಿತು?” ಎನ್ನಲು

¶ ಆಗ ಪ್ರವಾದಿಯಾದ ಹನನ್ಯನು ಪ್ರವಾದಿಯಾದ ಯೆರೆಮೀಯನ ಹೆಗಲಿನಿಂದ ನೊಗವನ್ನು ತೆಗೆದು ಮುರಿದುಹಾಕಿ ಎಲ್ಲಾ ಜನರ ಎದುರಿಗೆ,

ಇವನು ಮೊದಲು ತನ್ನ ಅಣ್ಣನಾದ ಸೀಮೋನನನ್ನು ಕಂಡು ಅವನಿಗೆ “ನಾವು ಮೆಸ್ಸೀಯನನ್ನು ಕಂಡುಕೊಂಡೆವು” (ಮೆಸ್ಸೀಯನು ಎಂದರೆ ಕ್ರಿಸ್ತನು) ಎಂದು ಹೇಳಿ,

¶ ಆದರೆ ಕೆಲವು ಕಾಲದಿಂದ ಆ ಪಟ್ಟಣದಲ್ಲಿದ್ದ ಸೀಮೋನನೆಂಬ ಒಬ್ಬ ಮನುಷ್ಯನು ತಾನು ಏನೋ ಒಬ್ಬ ಮಹಾತ್ಮನೆಂದು ಹೇಳಿಕೊಂಡು ಮಂತ್ರತಂತ್ರಗಳನ್ನು ನಡಿಸಿ ಸಮಾರ್ಯದ ಜನರಲ್ಲಿ ಬೆರಗನ್ನು ಹುಟ್ಟಿಸುತ್ತಿದ್ದನು.

ಅವರು ದ್ವೀಪದಲ್ಲೆಲ್ಲಾ ಸಂಚಾರಮಾಡಿ ಪಾಫೋಸ್ ಎಂಬ ಊರಿನ ತನಕ ಬಂದು ಅಲ್ಲಿ ಸುಳ್ಳುಪ್ರವಾದಿಯೂ, ಮಂತ್ರವಾದಿಯೂ ಆಗಿದ್ದ ‘ಬಾರ್‍ಯೇಸು’ ಎಂಬ ಒಬ್ಬ ಯೆಹೂದ್ಯ ಮನುಷ್ಯನನ್ನು ಕಂಡರು.

ಯನ್ನ, ಯಂಬ್ರ ಎಂಬವರು ಮೋಶೆಯನ್ನು ವಿರೋಧಿಸಿದಂತೆಯೇ ಈ ಮನುಷ್ಯರು ಸಹ ಸತ್ಯಕ್ಕೆ ವಿರೋಧಿಗಳಾಗಿದ್ದು, ಬುದ್ಧಿಹೀನರೂ ನಂಬಿಕೆಯ ವಿಷಯದಲ್ಲಿ ನಿಷ್ಪ್ರಯೋಜಕರೂ ಆಗಿದ್ದಾರೆ.