TSK

TSK · ಅಪೊಸ್ತಲರ ಕೃತ್ಯಗ 15:24

Treasury of Scripture Knowledge references in ಕನ್ನಡ IRV.

Back to passage

ಸೇನಾಧೀಶ್ವರನಾದ ಯೆಹೋವನು, “ನಿಮಗೆ ಪ್ರವಾದಿಸುವ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ. ಅವರು ನಿಮ್ಮಲ್ಲಿ ವ್ಯರ್ಥ ನಿರೀಕ್ಷೆಯನ್ನು ಹುಟ್ಟಿಸುತ್ತಾರೆ; ಯೆಹೋವನ ಬಾಯಿಂದ ಹೊರಟದ್ದನ್ನು ನುಡಿಯದೆ ಸ್ವಂತ ಮನಸ್ಸಿಗೆ ಬಂದದ್ದನ್ನೇ ಹೇಳುತ್ತಾರೆ.

ಇದಲ್ಲದೆ ಆತನು ನಮಗೂ, ಅವರಿಗೂ ಏನೂ ಭೇದಮಾಡದೆ ಅವರ ಹೃದಯಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.

ನನ್ನ ಜೊತೆಯಲ್ಲಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿಯಾಗಬೇಕೆಂದು ಯಾರೂ ಒತ್ತಾಯಮಾಡಲಿಲ್ಲ.

ನಿಮ್ಮಲ್ಲಿ ಭಿನ್ನಾಭಿಪ್ರಾಯಗಳು ಉಂಟಾಗುವುದಿಲ್ಲವೆಂದು ಕರ್ತನಲ್ಲಿ ನಿಮ್ಮನ್ನು ಕುರಿತಾಗಿ ನನಗೆ ಭರವಸೆ ಉಂಟು. ನಿಮ್ಮಲ್ಲಿ ಬೇಧವನ್ನು ಹುಟ್ಟಿಸುವವನು ಯಾವನಾದರೂ ಸರಿಯೇ, ಅವನು ದಂಡನೆಯನ್ನು ಅನುಭವಿಸುವನು.

ದೈಹಿಕವಾಗಿ ಪ್ರಶಂಸೆಯನ್ನು ಹೊಂದಬೇಕೆಂದಿರುವವರು ಸುನ್ನತಿ ಮಾಡಿಸಿಕೊಳ್ಳಿರಿ ಎಂಬುದಾಗಿ ನಿಮ್ಮನ್ನು ಒತ್ತಾಯಿಸುತ್ತಾರೆ. ಏಕೆಂದರೆ ಕ್ರಿಸ್ತನ ಶಿಲುಬೆಯ ದೆಸೆಯಿಂದ ತಮಗೆ ಹಿಂಸೆಯಾಗಬಾರದೆಂಬುದೇ ಅವರ ಉದ್ದೇಶ.

¶ ಅನೇಕರು, ಪ್ರಮುಖವಾಗಿ ಸುನ್ನತಿಹೊಂದಿದವರು, ಬರೀ ಮಾತುಗಾರರೂ, ಮೋಸಗಾರರೂ, ಅಧಿಕಾರಕ್ಕೆ ಒಳಪಡದವರು ಆಗಿದ್ದಾರೆ.