TSK

TSK · ಅಪೊಸ್ತಲರ ಕೃತ್ಯಗ 15:4

Treasury of Scripture Knowledge references in ಕನ್ನಡ IRV.

Back to passage

ಅಲ್ಲಿ ಸಭೆಯನ್ನು ಕೂಡಿಸಿ, ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳೆಲ್ಲವನ್ನೂ, ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲು ತೆರೆದದ್ದನ್ನೂ ವಿವರವಾಗಿ ಅವರಿಗೆ ತಿಳಿಸಿದರು.

¶ ಗುಂಪುಸೇರಿದ್ದವರೆಲ್ಲರೂ ಈ ಮಾತುಗಳನ್ನು ಕೇಳಿ ಮೌನವಾಗಿದ್ದು ಬಾರ್ನಬನೂ ಪೌಲನೂ ತಮ್ಮ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಎಲ್ಲಾ ಸೂಚಕ ಕಾರ್ಯಗಳನ್ನೂ, ಅದ್ಭುತಕಾರ್ಯಗಳನ್ನೂ ವಿವರಿಸಿದ್ದನ್ನು ಕಿವಿಗೊಟ್ಟು ಕೇಳಿದರು.

ಆದ್ದರಿಂದ ಕ್ರಿಸ್ತನು ನಿಮ್ಮನ್ನು ಸೇರಿಸಿಕೊಂಡಂತೆ ನೀವು ಸಹ ಒಬ್ಬರನ್ನೊಬ್ಬರು ಸೇರಿಸಿಕೊಂಡು ದೇವರನ್ನು ಮಹಿಮೆಪಡಿಸಿರಿ.

ಆದರೆ ನಾನು ಈಗ ಎಂಥವನಾಗಿದ್ದೇನೊ ಅದು ದೇವರ ಕೃಪೆಯಿಂದಲೇ ಮತ್ತು ಆತನ ಕೃಪೆಯು ನನ್ನಲ್ಲಿ ನಿಷ್ಫಲವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿರುವ ದೇವರ ಕೃಪೆಯೇ.

¶ ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೆನೆಂದರೆ; ದೇವರಿಂದ ಪಡೆದ ಕೃಪೆಯನ್ನು ವ್ಯರ್ಥಮಾಡಬೇಡಿರಿ.

ಈ ಉಪದೇಶವನ್ನು ಮೀರಿದ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿಕೊಳ್ಳಬೇಡಿರಿ. ಅವನಿಗೆ ಶುಭವಾಗಲಿ ಎಂದು ಹೇಳಬೇಡಿರಿ.