TSK

TSK · ಅಪೊಸ್ತಲರ ಕೃತ್ಯಗ 16:29

Treasury of Scripture Knowledge references in ಕನ್ನಡ IRV.

Back to passage

ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಜನಾಂಗಗಳು ನಡುಗಲಿ. ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನು ಆಳುತ್ತಾನೆ; ಭೂಮಿಯು ಕಂಪಿಸಲಿ.

ನಿನ್ನನ್ನು ಕುಗ್ಗಿಸಿದವರ ಸಂತಾನದವರು ನಿನ್ನ ಬಳಿಗೆ ತಗ್ಗಿಬಗ್ಗಿ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರೂ ನಿನ್ನ ಕಾಲಕೆಳಗೆ ಅಡ್ಡಬಿದ್ದು ನೀನು ಯೆಹೋವನ ಪಟ್ಟಣ, ಇಸ್ರಾಯೇಲಿನ ಸದಮಲಸ್ವಾಮಿಯ ಚೀಯೋನ್ ಎಂದು ಕೊಂಡಾಡುವರು.

ಯೆಹೋವನ ಮಾತಿಗೆ ಭಯಪಡುವವರೇ, ಆತನ ಮಾತನ್ನು ಕೇಳಿರಿ! ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಂಬಂಧಿಗಳು, “ಯೆಹೋವನು ಮಹಿಮೆಪಡಲಿ, ನಿಮಗಾಗುವ ಉತ್ಸಾಹವನ್ನು ನೋಡೋಣ” ಎಂದು ಹೇಳಿದ್ದಾರಲ್ಲಾ; ಅವರಿಗಂತು ಅವಮಾನವಾಗುವುದು.

ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಮತ್ತು ಶಾಶ್ವತ ರಾಜನೂ ಆಗಿದ್ದಾನೆ. ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು.

¶ ಅದಕ್ಕೆ ಸೌಲನು;, “ಕರ್ತನೇ, ನೀನಾರು?” ಎಂದು ಕೇಳಿದ್ದಕ್ಕೆ, ಕರ್ತನು, ‹“ನೀನು ಹಿಂಸೆಪಡಿಸುವ ಯೇಸುವೇ ನಾನು;›

‹ತಾವು ಯೆಹೂದ್ಯರೆಂದು ಸುಳ್ಳಾಗಿ ಕೊಚ್ಚಿಕೊಳ್ಳುವ ಕೆಲವರನ್ನು›‹ಸೈತಾನನ ಸಭಾಮಂದಿರದಿಂದ ಕರೆಯಿಸುವೆನು. ಅವರು›‹ನಿನ್ನ ಪಾದಕ್ಕೆ ಬಿದ್ದು ನಮಸ್ಕರಿಸುವಂತೆಯೂ, ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುವೆನು.›