TSK

TSK · ಅಪೊಸ್ತಲರ ಕೃತ್ಯಗ 18:14

Treasury of Scripture Knowledge references in ಕನ್ನಡ IRV.

Back to passage

ಅದಕ್ಕಾತನು, ‹“ಎಲಾ, ಅಪನಂಬಿಕೆಯುಳ್ಳಂಥ ಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇರಲಿ! ಇನ್ನೆಷ್ಟು ದಿನ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ”› ಅಂದನು.

ಆತನು ಸುಮಾರು ನಲವತ್ತು ವರ್ಷಗಳವರೆಗೂ ಅಡವಿಯಲ್ಲಿ ಅವರ ನಡವಳಿಕೆಯನ್ನು ಸಹಿಸಿಕೊಂಡು,

ಯೆಹೂದ್ಯರು ಈ ಮನುಷ್ಯನನ್ನು ಹಿಡಿದು ಕೊಲ್ಲಬೇಕೆಂದಿದ್ದಾಗ, ನಾನು ಸಿಪಾಯಿಗಳೊಂದಿಗೆ ಹೋಗಿ ಅವನನ್ನು ರೋಮಾಪುರದ ಹಕ್ಕುದಾರನೆಂದು ತಿಳಿದು ಅವನನ್ನು ತಪ್ಪಿಸಿದೆನು.

ತಪ್ಪು ಹೊರಿಸುವವರು ನಿಂತುಕೊಂಡು ನಾನು ಭಾವಿಸಿದ್ದ ಅಪರಾಧಗಳಲ್ಲಿ ಒಂದನ್ನಾದರೂ ಅವನ ಮೇಲೆ ಹೊರಿಸದೆ,

¶ ಆಗ ಅಗ್ರಿಪ್ಪನು, ಪೌಲನಿಗೆ; “ನೀನು ನಿನ್ನ ಪರವಾಗಿ ಮಾತನಾಡಬಹುದು” ಅನ್ನಲು, ಪೌಲನು ಕೈಯೆತ್ತಿ, ಪ್ರತಿವಾದ ಮಾಡಿದ್ದೇನಂದರೆ;

¶ ನಾನು ನನ್ನನ್ನು ಹೊಗಳಿಕೊಳ್ಳುವ ಹುಚ್ಚುತನವನ್ನು ನೀವು ಸ್ವಲ್ಪ ಸಹಿಸಿಕೊಳ್ಳಬೇಕೆಂದು ಕೇಳಿಕೊಳ್ಳುತ್ತೇನೆ. ನೀವು ನನ್ನನ್ನು ಸಹಿಸಿಕೊಳ್ಳಿರಿ.

ತಾನೂ ಸಹ ಬಲಹೀನನಾಗಿರುವುದರಿಂದ ಅವನು ಅಜ್ಞಾನಿಗಳಿಗೂ ಮತ್ತು ಮಾರ್ಗತಪ್ಪಿದವರಿಗೂ ದಯಾಪರನಾಗಿ ನಡೆದುಕೊಳ್ಳುವುದಕ್ಕೆ ಶಕ್ತನಾಗಿರುವನು.